Mysore
25
broken clouds

Social Media

ಭಾನುವಾರ, 15 ಜೂನ್ 2025
Light
Dark

ಕೇರಳದಲ್ಲಿ ಪ್ರವಾಹದ ತೀವ್ರತೆ: ರಕ್ಷಣಾ ಕಾರ್ಯಾಚರಣೆಗೆ 1,167 ಮಂದಿ ನಿಯೋಜನೆ

ವಯನಾಡು: ಮೆಪ್ಪಾಡಿಯಲ್ಲಿ ಇರುವ ಸರ್ಕಾರಿ ಆಸ್ಪತ್ರೆಯ ಶವಾಗಾರವನ್ನು ತಾತ್ಕಾಲಿಕವಾಗಿ ಸಭಾಂಗಣಕ್ಕೆ ಶಿಫ್ಟ್ ಮಾಡಲಾಗಿದೆ.

ಭೂಕುಸಿತದಲ್ಲಿ ಗಾಯಗೊಂಡವರ ಚಿಕಿತ್ಸೆಗಾಗಿ ಮೇಪ್ಪಾಡಿ ಪಾಲಿಟೆಕ್ನಿಕ್‌ನಲ್ಲಿ ತಾತ್ಕಾಲಿಕ ಆಸ್ಪತ್ರೆ ನಿರ್ಮಿಸಲಾಗಿದೆ. ಕಣ್ಣೂರು, ಕಲ್ಲಿಕೋಟೆ ಹಾಗೂ ತೃಶೂರ್‌ನ ವೈದ್ಯಕೀಯ ಕಾಲೇಜುಗಳಿಂದ ತಂಡಗಳನ್ನು ವಯನಾಡಿಗೆ ಕರೆತರಲಾಗಿದೆ. ಶಸ್ತ್ರಚಿಕಿತ್ಸೆ, ಹೃದ್ರೋಗ, ಮೂಳೆ ಚಿಕಿತ್ಸೆ, ಮನೋವೈದ್ಯ ಹಾಗೂ ವಿಧಿವಿಜ್ಞಾನ ವಿಭಾಗಗಳಿಂದ ಹೆಚ್ಚುವರಿ ವೈದ್ಯರು ಮತ್ತು ನರ್ಸ್‌ಗಳನ್ನು ನಿಯೋಜಿಸಲಾಗಿದೆ.

ದುರಂತ ಪೀಡಿತ ಚುರಲ್‌ಮಲದಲ್ಲಿ ಸೇನೆ ನಿರ್ಮಿಸುತ್ತಿರುವ ತಾತ್ಕಾಲಿಕ ಬೈಲಿ ಸೇತುವೆ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಇದು ಪೂರ್ಣಗೊಂಡ ಬಳಿಕ ಕಾರ್ಯಾಚರಣೆಗೆ ಇನ್ನಷ್ಟು ವೇಗ ದೊರೆಯಲಿದೆ.

ಪ್ರವಾಹದ ತೀವ್ರತೆಗೆ ಚುರಲ್‌ಮಲದಲ್ಲಿನ ಸೇತುವೆ ಕೊಚ್ಚಿ ಹೋಗಿದ್ದು, ಅತೀ ಹೆಚ್ಚು ದುರಂತಕ್ಕೊಳಗಾದ ಮುಂಡಕೈ ಭಾಗದೊಂಡಿಗೆ ಸಂಪರ್ಕ ಕಡಿತಗೊಂಡಿದೆ. ಇದು ಕೂಡ ಕಾರ್ಯಾಚರಣೆಗೆ ತೊಡಕಾಗಿ ಪರಿಣಮಿಸಿದೆ. ಹೀಗಾಗಿ ಸೇನಾ ಪಡೆ ಎರಡೂ ಗ್ರಾಮಗಳನ್ನು ಸಂಪರ್ಕಿಸಲು ತಾತ್ಕಾಲಿಕ ಬೈಲಿ ಸೇತುವೆ ನಿರ್ಮಿಸುತ್ತಿದೆ.

ರಕ್ಷಣಾ ಕಾರ್ಯಾಚರಣೆಗೆ ಸುಮಾರು 1,167 ಮಂದಿಯನ್ನು ನಿಯೋಜಿಸಲಾಗಿದೆ.

Tags:
error: Content is protected !!