ದೇಶ- ವಿದೇಶ

ಪಾಕ್‌ ಪರ ಬೇಹುಗಾರಿಗೆ : ಯೂಟ್ಯೂಬರ್‌ ಮಲ್ಹೋತ್ರಾ ಬಂಧನ

ಹೊಸದಿಲ್ಲಿ : ಪಾಕಿಸ್ತಾನ ಪ್ರಜೆಗಳ ಜೊತೆಗೆ ಸೂಕ್ಷ್ಮ ಮಾಹಿತಿಯನ್ನು ರವಾನಿಸಿದ ಮತ್ತು ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಹರಿಯಾಣದ ಹಿಸಾರ್ ಮೂಲದ ಮಹಿಳಾ ಪ್ರಯಾಣ ಬ್ಲಾಗರ್ ಒಬ್ಬರನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡ ನಂತರ ಈ ವಾರ ಹರಿಯಾಣದಲ್ಲಿ ಬಂಧಿಸಿರುವ ಮೂರನೇ ಪ್ರಕರಣ ಇದಾಗಿದೆ. ಹಿಸಾರ್ ನಿವಾಸಿಯಾಗಿರುವ ಟ್ರಾವೆಲ್ ಬ್ಲಾಗರ್ ಜ್ಯೋತಿ ಮಲ್ಹೋತ್ರಾ ಅವರನ್ನು ಪಾಕಿಸ್ತಾನಿ ಪ್ರಜೆಗಳ ಜೊತೆಗೆ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಂಡಿರುವುದನ್ನು ಒಪ್ಪಿಕೊಂಡ ನಂತರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಮಹಿಳೆಯ ವಿರುದ್ಧ 1923 ರ ಅಧಿಕೃತ ರಹಸ್ಯ ಕಾಯ್ದೆಯ ಸೆಕ್ಷನ್ 3 ಮತ್ತು 5 ಮತ್ತು ಭಾರತೀಯ ನ್ಯಾಯ ಸಂಹಿತಾ ಕಾಯ್ದೆಯ ಸೆಕ್ಷನ್ 152 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸದ್ಯ ಅವರನ್ನು ಐದು ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಲಾಗಿದೆ. ಜ್ಯೋತಿ ಮಲ್ಹೋತ್ರಾ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಹೆಚ್ಚಿನ ವಿವರಗಳನ್ನು ಸಂಗ್ರಹಿಸಲು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ ಎಂದು ಹಿಸಾರ್ ಪೊಲೀಸ್ ವಕ್ತಾರ ವಿಕಾಸ್ ಕುಮಾರ್ ತಿಳಿಸಿದ್ದಾರೆ. ಸಬ್ ಇನ್ಸ್‌ಪೆಕ್ಟರ್ ಸಂಜಯ್ ಸಲ್ಲಿಸಿದ ದೂರಿನ ಆಧಾರದ ಮೇಲೆ ಹಿಸಾರ್ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಎಫ್‌ಐಆರ್ ಪ್ರಕಾರ, ಬ್ಲಾಗರ್ 2023 ರಲ್ಲಿ ದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್‌ಗೆ ಭೇಟಿ ನೀಡಿದಾಗ, ಅಲ್ಲಿ ಅವರು ನವದೆಹಲಿಯ ಪಾಕಿಸ್ತಾನ ಹೈಕಮಿಷನ್ (ಪಿಎಚ್‌ಸಿ) ಸಿಬ್ಬಂದಿ ಎಹ್ಸಾನ್-ಉರ್-ರಹೀಮ್ ಅಲಿಯಾಸ್ ಡ್ಯಾನಿಶ್ ಅವರನ್ನು ಸಂಪರ್ಕಿಸಿದ್ದರು.

ಪ್ರಸ್ತುತ ಬಂಧನಕ್ಕೆ ಒಳಗಾಗಿರುವ ಮಹಿಳೆಯೂ ಎಹ್ಸಾನ್-ಉರ್-ರಹೀಮ್ ಅಲಿಯಾಸ್ ಡ್ಯಾನಿಶ್ ಜೊತೆ ಸಂಪರ್ಕದಲ್ಲಿದ್ದರು. 2023 ರಲ್ಲಿ ಪಾಕಿಸ್ತಾನಕ್ಕೆ ಭೇಟಿ ನೀಡಿದ ಸಮಯದಲ್ಲಿ, ಅಲಿ ಎಹ್ವಾನ್ ಅವರನ್ನು ಭೇಟಿಯಾದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ.

ಪಾಕಿಸ್ತಾನದಲ್ಲಿ ನನ್ನ ವಾಸ್ತವ್ಯ ಮತ್ತು ಪ್ರಯಾಣವನ್ನು ಖಚಿತಪಡಿಸಿಕೊಂಡು ಎಹ್ವಾನ್ ಅವರನ್ನು ಪಾಕಿಸ್ತಾನಿ ಭದ್ರತಾ ಮತ್ತು ಗುಪ್ತಚರ ಅಧಿಕಾರಿಗಳಿಗೆ ಪರಿಚಯಿಸಿದರು, ಅಲ್ಲಿ ಶಕೀರ್ ಮತ್ತು ರಾಣಾ ಶಹಬಾಜ್ ಅವರನ್ನು ಸಹ ಭೇಟಿಯಾಗಿದ್ದರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

12 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

12 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

14 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

14 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

19 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

19 hours ago