ದೇಶ- ವಿದೇಶ

ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ಆರೋಗ್ಯ ಸ್ಥಿರ: ಮಹಾರಾಷ್ಟ್ರ ಸಚಿವರಿಂದ ಮಾಹಿತಿ

ಠಾಣೆ: ಭಾರತ ಕ್ರಿಕೆಟ್‌ ತಂಡ ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಬಗ್ಗೆ ಮಹಾರಾಷ್ಟ್ರದ ಸಾರಿಗೆ ಸಚಿವ ಪ್ರತಾಪ್‌ ಸರ್‌ ನಾಯಿಕ್‌ ಅವರು ಇಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಕಳೆದ ಕೆಲ ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಬ್ಳಿ ಅವರನ್ನು ಭೇಟಿಯಾದ ಬಳಿಕ ಮಾತನಾಡಿದ ಅವರು, ಕಾಂಬ್ಳೆ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದರು.

ಇನ್ನು ಕಾಂಬ್ಳೆ ಅವರಿಗೆ ಮೂತ್ರನಾಳದ ಸೋಂಕು ಕಾಣಿಸಿಕೊಂಡಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ.

ಈ ಬಗ್ಗೆ ಮಾಹಿತಿ ನೀಡಿದ ಮಹಾರಾಷ್ಟ್ರ ಸಚಿವರು, ಕಾಂಬ್ಳಿ ಅವರು ಸದಾ ತಮ್ಮ ಪ್ರದರ್ಶನದಿಂದ ದೇಶ ಹೆಮ್ಮೆಪಡುವಂತೆ ಮಾಡಿದ್ದಾರೆ. ಅವರ ಕಣ್ಣುಗಳು ಈಗಲೂ ಮೈದಾನದಲ್ಲಿದ್ದ ದೃಢತೆ ಮತ್ತು ಹೋರಾಟದ ಮನೋಭಾವವನ್ನು ಪ್ರತಿಬಿಂಬಿಸುತ್ತಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಶೀಘ್ರದಲ್ಲೇ ಚೇತರಿಸಿಕೊಳ್ಳುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ನಾನು ಕಾಂಬ್ಳಿ ಅವರ ಕುಟುಂಬದವರ ಜೊತೆಗೂ ಮಾತನಾಡಿದ್ದೇನೆ. ಅವರಿಗೆ ಉತ್ತಮ ವೈದ್ಯಕೀಯ ನೆರವು ಒದಗಿಸುವುದಾಗಿ ಭರವಸೆ ನೀಡಿದ್ದೇನೆ ಎಂದು ತಿಳಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಹದೇಶ್ವರ ಬೆಟ್ಟ: ಪೌರಕಾರ್ಮಿಕರ ಜೊತೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ ಎ.ಈ.ರಘು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ…

50 mins ago

ಓದುಗರ ಪತ್ರ: ನಕಲಿ ರಹದಾರಿ: ಕಠಿಣ ಶಿಕ್ಷೆ ವಿಧಿಸಿ

ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್‌ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್‌ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…

4 hours ago

ಓದುಗರ ಪತ್ರ: ಬ್ಯಾಂಕ್‌ಗಳ ವಿಶ್ವಾಸಾರ್ಹತೆಗೆ ಧಕ್ಕೆ

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್‌ಗಳಲ್ಲಿ ಗ್ರಾಹಕರು ಅಡಮಾನ ಇಟ್ಟಿರುವ ಚಿನ್ನವನ್ನು ಬ್ಯಾಂಕ್ ಸಿಬ್ಬಂದಿಯೇ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಮಾಧ್ಯಮಗಳಲ್ಲಿ…

4 hours ago

ಓದುಗರ ಪತ್ರ: ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಿಬ್ಬಂದಿ ನಿಯೋಜಿಸಿ

ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ಸಿ ಆಂಡ್ ಡಿ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಕಷ್ಟು ಸಿಬ್ಬಂದಿ…

5 hours ago

ಓದುಗರ ಪತ್ರ: ಬ್ಯಾಂಕ್ ಕನಿಷ್ಠ ಮೊತ್ತ ರದ್ದಾಗಲಿ

ಖಾಸಗಿ ಹಾಗೂ ಸರ್ಕಾರಿ ಬ್ಯಾಂಕುಗಳು ಈಗಲೂ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಇಲ್ಲ ಎಂಬ ಕಾರಣಕ್ಕೆ ದಂಡ ವಿದಿಸುತ್ತಿದ್ದು, ೨೦೨೪-೨೫ನೇ…

5 hours ago

ಇಂದು ಕೆ.ಆರ್.ನಗರದಲ್ಲಿ ಆದಿಶಕ್ತಿ ತೋಪಮ್ಮ ಜಾತ್ರಾ ಮಹೋತ್ಸವ

ಭೇರ್ಯ ಮಹೇಶ್ ಆದಿಶಕ್ತಿ ತೋಪಮ್ಮ ಟ್ರಸ್ಟ್ ಆಡಳಿತ ಮಂಡಳಿಯಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಭೇಟಿ ನಿರೀಕ್ಷೆ ಕೆ.ಆರ್.ನಗರ: ಫೆಬ್ರವರಿ…

5 hours ago