ನವದೆಹಲಿ: ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.
ಸತ್ಯಪಾಲ್ ಮಲ್ಲಿಕ್ ಅವರು ಇಂದು ಮಧ್ಯಾಹ್ನ 1 ಗಂಟೆಯ ಸುಮಾರಿಗೆ ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಸತ್ಯಪಾಲ್ ಮಲ್ಲಿಕ್ ಅವರು ಗೋವಾ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.





