Mysore
17
broken clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಜಮ್ಮು-ಕಾಶ್ಮೀರದ ಮಾಜಿ ಸಿಎಂ ಗುಲಾಂ ನಬಿ ಆಜಾದ್‌ ಆರೋಗ್ಯದಲ್ಲಿ ಏರುಪೇರು

cm gulam nabi

ಕುವೈತ್: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಆರೋಗ್ಯದಲ್ಲಿ ಏರುಪೇರಾಗಿದೆ.

ಬಿಜೆಪಿ ಸಂಸದ ಬೈಜಯಂತ್ ಪಾಂಡಾ ಜತೆ ಆಜಾದ್ ಕುವೈತ್‍ಗೆ ತೆರಳಿದ್ದರು. ಆಪರೇಷನ್ ಸಿಂಧೂರ್ ಬಳಿಕ ಪಾಕಿಸ್ತಾನದ ಬಣ್ಣವನ್ನು ಜಗತ್ತಿನ ಮುಂದೆ ಬಯಲು ಮಾಡಲು ಗಲ್ಫ್ ರಾಷ್ಟ್ರಗಳಿಗೆ ಬಿಜೆಪಿ ಸಂಸದ ಬೈಜಯಂತ್ ಪಾಂಡಾ ನೇತೃತ್ವದ ಆಯೋಗ ಭೇಟಿ ನೀಡುತ್ತಿದೆ. ಕುವೈತ್‍ನಲ್ಲಿ ಆಜಾದ್ ಅವರ ಆರೋಗ್ಯ ಕೈಕೊಟ್ಟಿದ್ದು, ಈಗ ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ. ಈ ಬಗ್ಗ ಎಸಂಸದ ಪಾಂಡಾ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಸಂಸದ ಬೈಜಯಂತ್ ಜೈ ಪಾಂಡಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ನಮ್ಮ ನಿಯೋಗದ ಪ್ರವಾಸದ ಅರ್ಧದಾರಿಯಲ್ಲೇ ಗುಲಾಂ ನಬಿ ಆಜಾದ್ ಅವರನ್ನು ಆಸ್ಪತ್ರೆಗೆ ದಾಖಲಿಸಬೇಕಾಯಿತು ಎಂದು ಹೇಳಿದ್ದಾರೆ.

ಅವರ ಸ್ಥಿತಿ ಸ್ಥಿರವಾಗಿದೆ. ಅವರು ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ ಮತ್ತು ಅವರಿಗೆ ಕೆಲವು ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುವುದು. ಇದರೊಂದಿಗೆ, ಬಹ್ರೇನ್ ಮತ್ತು ಕುವೈತ್‍ನಲ್ಲಿ ನಡೆದ ಸಭೆಗಳಲ್ಲಿ ಅವರ ಕೊಡುಗೆ ಅತ್ಯಂತ ಪ್ರಭಾವಶಾಲಿಯಾಗಿತ್ತು. ಸೌದಿ ಅರೇಬಿಯಾ ಮತ್ತು ಅಲ್ಜೀರಿಯಾದಲ್ಲಿ ಅವರ ಅನುಪಸ್ಥಿತಿ ಬೇಸರವನ್ನುಂಟು ಮಾಡಿದೆ ಎಂದು ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುತ್ತಿರುವ ಗುಲಾಂ ನಬಿ ಆಜಾದ್, ಕುವೈತ್‍ನಲ್ಲಿನ ತೀವ್ರ ಶಾಖದಿಂದಾಗಿ ನನ್ನ ಆರೋಗ್ಯದ ಮೇಲೆ ಪರಿಣಾಮ ಬೀರಿದ್ದರೂ, ದೇವರ ದಯೆಯಿಂದ ನಾನು ಚೆನ್ನಾಗಿದ್ದೇನೆ. ಎಲ್ಲಾ ಪರೀಕ್ಷೆಗಳ ಫಲಿತಾಂಶಗಳು ಸಾಮಾನ್ಯವಾಗಿವೆ. ನಿಮ್ಮ ಕಾಳಜಿ ಮತ್ತು ಪ್ರಾರ್ಥನೆಗಳಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

Tags:
error: Content is protected !!