cm gulam nabi
ಕುವೈತ್: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಆರೋಗ್ಯದಲ್ಲಿ ಏರುಪೇರಾಗಿದೆ.
ಬಿಜೆಪಿ ಸಂಸದ ಬೈಜಯಂತ್ ಪಾಂಡಾ ಜತೆ ಆಜಾದ್ ಕುವೈತ್‍ಗೆ ತೆರಳಿದ್ದರು. ಆಪರೇಷನ್ ಸಿಂಧೂರ್ ಬಳಿಕ ಪಾಕಿಸ್ತಾನದ ಬಣ್ಣವನ್ನು ಜಗತ್ತಿನ ಮುಂದೆ ಬಯಲು ಮಾಡಲು ಗಲ್ಫ್ ರಾಷ್ಟ್ರಗಳಿಗೆ ಬಿಜೆಪಿ ಸಂಸದ ಬೈಜಯಂತ್ ಪಾಂಡಾ ನೇತೃತ್ವದ ಆಯೋಗ ಭೇಟಿ ನೀಡುತ್ತಿದೆ. ಕುವೈತ್‍ನಲ್ಲಿ ಆಜಾದ್ ಅವರ ಆರೋಗ್ಯ ಕೈಕೊಟ್ಟಿದ್ದು, ಈಗ ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ. ಈ ಬಗ್ಗ ಎಸಂಸದ ಪಾಂಡಾ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಸಂಸದ ಬೈಜಯಂತ್ ಜೈ ಪಾಂಡಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ನಮ್ಮ ನಿಯೋಗದ ಪ್ರವಾಸದ ಅರ್ಧದಾರಿಯಲ್ಲೇ ಗುಲಾಂ ನಬಿ ಆಜಾದ್ ಅವರನ್ನು ಆಸ್ಪತ್ರೆಗೆ ದಾಖಲಿಸಬೇಕಾಯಿತು ಎಂದು ಹೇಳಿದ್ದಾರೆ.
ಅವರ ಸ್ಥಿತಿ ಸ್ಥಿರವಾಗಿದೆ. ಅವರು ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ ಮತ್ತು ಅವರಿಗೆ ಕೆಲವು ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುವುದು. ಇದರೊಂದಿಗೆ, ಬಹ್ರೇನ್ ಮತ್ತು ಕುವೈತ್‍ನಲ್ಲಿ ನಡೆದ ಸಭೆಗಳಲ್ಲಿ ಅವರ ಕೊಡುಗೆ ಅತ್ಯಂತ ಪ್ರಭಾವಶಾಲಿಯಾಗಿತ್ತು. ಸೌದಿ ಅರೇಬಿಯಾ ಮತ್ತು ಅಲ್ಜೀರಿಯಾದಲ್ಲಿ ಅವರ ಅನುಪಸ್ಥಿತಿ ಬೇಸರವನ್ನುಂಟು ಮಾಡಿದೆ ಎಂದು ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುತ್ತಿರುವ ಗುಲಾಂ ನಬಿ ಆಜಾದ್, ಕುವೈತ್‍ನಲ್ಲಿನ ತೀವ್ರ ಶಾಖದಿಂದಾಗಿ ನನ್ನ ಆರೋಗ್ಯದ ಮೇಲೆ ಪರಿಣಾಮ ಬೀರಿದ್ದರೂ, ದೇವರ ದಯೆಯಿಂದ ನಾನು ಚೆನ್ನಾಗಿದ್ದೇನೆ. ಎಲ್ಲಾ ಪರೀಕ್ಷೆಗಳ ಫಲಿತಾಂಶಗಳು ಸಾಮಾನ್ಯವಾಗಿವೆ. ನಿಮ್ಮ ಕಾಳಜಿ ಮತ್ತು ಪ್ರಾರ್ಥನೆಗಳಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…