Mysore
32
few clouds

Social Media

ಭಾನುವಾರ, 05 ಏಪ್ರಿಲ 2026
Light
Dark

ಮಹಾರಾಷ್ಟ್ರ ಮಾಜಿ ಸಿಎಂ ಶರದ್‌ ಪವಾರ್‌ ಆಸ್ಪತ್ರೆಗೆ ದಾಖಲು: ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ನವದೆಹಲಿ: ಎನ್‌ಸಿಪಿ ಮುಖ್ಯಸ್ಥ ಹಾಗೂ ಮಹಾರಾಷ್ಟ್ರ ಮಾಜಿ ಸಿಎಂ ಶರದ್‌ ಪವಾರ್‌ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಸೋಮವಾರ ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶರದ್‌ ಪವಾರ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದು ಕರೆ ಮಾಡಿ ಆರೋಗ್ಯ ವಿಚಾರಿಸಿದರು.

ಆಸ್ಪತ್ರೆ ವೈದ್ಯರು ಶರದ್‌ ಪವಾರ್‌ ಅವರ ಆರೋಗ್ಯ ಕುರಿತು ಮಾಹಿತಿ ನೀಡಿದ್ದು, ಪವಾರ್‌ ಅವರ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಇನ್ನೂ ಕೆಲವು ದಿನಗಳ ಕಾಲ ಅವರನ್ನು ತಜ್ಞ ವೈದ್ಯರ ವೀಕ್ಷಣೆಯಲ್ಲಿ ಇರಿಸಲಾಗುವುದು. ಮುಂದಿನ ಹಂತದ ಚಿಕಿತ್ಸೆಯ ಬಗ್ಗೆ ಅವರ ಚೇತರಿಕೆಯ ಪ್ರಗತಿಯನ್ನು ಆಧರಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Tags:
error: Content is protected !!