ನವದೆಹಲಿ: ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದ್ದು, ಸುಪ್ರೀಂಕೋರ್ಟ್‌ನಿಂದ ನೋಟಿಸ್ ಜಾರಿಯಾಗಿದೆ.
ಲೈಂಗಿಕ ದೌರ್ಜನ್ಯ ಮತ್ತು ಕಿಡ್ನ್ಯಾಪ್ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ರೇವಣ್ಣ ಅವರ ಜಾಮೀನು ರದ್ದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ದೇಶದ ಅತ್ಯುನ್ನತ ನ್ಯಾಯಾಲಯ ಈ ಆದೇಶ ನೀಡಿದೆ.
ಮಹಿಳೆಯೊಬ್ಬರ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್.ಡಿ. ರೇವಣ್ಣ ಅವರಿಗೆ ಈ ಹಿಂದೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಆದರೆ, ಹೈಕೋರ್ಟ್ ನೀಡಿದ್ದ ಈ ಜಾಮೀನು ಆದೇಶವನ್ನು ಪ್ರಶ್ನಿಸಿ ಸಂತ್ರಸ್ತೆ ಹಾಗೂ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದವು.
ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ನ್ಯಾಯಪೀಠ, ಹೈಕೋರ್ಟ್ ನೀಡಿರುವ ಜಾಮೀನನ್ನು ಏಕೆ ರದ್ದುಗೊಳಿಸಬಾರದು ಎಂದು ಪ್ರಶ್ನಿಸಿ ಎಚ್.ಡಿ. ರೇವಣ್ಣ ಅವರಿಗೆ ತುರ್ತು ನೋಟಿಸ್ ಜಾರಿ ಮಾಡಿದ್ದು, ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿದೆ.
ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಹಾಗೂ ಸಂತ್ರಸ್ತೆ ಹೇಳಿಕೆ ನೀಡದಂತೆ ತಡೆಯಲು ಆಕೆಯನ್ನು ಅಪಹರಣ ಮಾಡಲಾಗಿತ್ತು ಎಂಬ ಆರೋಪ ರೇವಣ್ಣ ಅವರ ಮೇಲಿದೆ.
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…