ಕಠ್ಮಂಡು: ಮಾರ್ಯಾದಾ ಪುರೋಷತ್ತಮ ಶ್ರೀರಾಮನ ಬಗ್ಗೆ ನಾನು ಲಘುವಾಗಿ ಮಾತನಾಡಿದ್ದಕ್ಕೆ ಅಧಿಕಾರ ಕಳೆದುಕೊಳ್ಳುವಂತಾಯಿತು ಎಂದು ನೇಪಾಳದ ಮಾಜಿ ಪ್ರಧಾನಿ ಕೆ.ಪಿ.ಓಲಿ ಅಲವತ್ತುಕೊಂಡಿದ್ದಾರೆ. ಈ ಮೂಲಕ ನೇಪಾಳದ ಪ್ರತಿಭಟನೆಯ ಹಿಂದೆ ಭಾರತದ ಕೈವಾಡವಿದೆ ಎಂದು ಬಿಂಬಿಸಲು ಯತ್ನಿಸಿದ್ದಾರೆ.
ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ತಮ್ಮ ದೇಶದಿಂದ ಪಲಾಯನ ಮಾಡಿದ ನಂತರ, ತಮ್ಮ ಮೊದಲ ಪ್ರತಿಕ್ರಿಯೆ ನೀಡಿರುವ ಅವರು, ಪ್ರಸ್ತುತ ನೇಪಾಳ ಸೇನೆಯ ಶಿವಪುರಿ ಬ್ಯಾರಕ್‍ನಲ್ಲಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ.
ತಮ್ಮ ದೇಶವನ್ನು ಆವರಿಸಿರುವ ಹಿಂಸಾಚಾರ ಅಥವಾ ಪ್ರತಿಭಟನೆಗಳಿಗೆ ಕಾರಣವಾದ ಸಾಮಾಜಿಕ ಮಾಧ್ಯಮ ನಿಷೇಧಕ್ಕೆ ಪ್ರತಿಕ್ರಿಯಿಸದ ಓಲಿ, ಅಯೋಧ್ಯೆಯಲ್ಲಿ ರಾಮನ ಜನನವನ್ನು ವಿರೋಧಿಸಿದ್ದರಿಂದ ಅಧಿಕಾರ ಕಳೆದುಕೊಂಡಿದ್ದೇನೆ ಎಂದು ಹೇಳಿದ್ದಾರೆ.
ಇದನ್ನು ಓದಿ: ಅಮೇರಿಕಾದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತಮಿತ್ರನ ಹತ್ಯೆ
ಲಿಪುಲೇಖ್, ಕಲಾಪಾನಿ ಮತ್ತು ಲಿಂಪಿಯಾಧುರಾ – ನೇಪಾಳವು ಭಾರತದೊಂದಿಗೆ ವಿವಾದಿತ ಪ್ರದೇಶವೆಂದು ಹೇಳಿಕೊಳ್ಳುವ ವಿಷಯವನ್ನು ಎತ್ತದಿದ್ದರೆ ನಾನು ಅಧಿಕಾರದಲ್ಲಿ ಉಳಿಯುತ್ತಿದ್ದೆ. ಈ ಎರಡೂ ಪ್ರದೇಶಗಳು ನೇಪಾಳಕ್ಕೆ ಸೇರಿವೆ ಎಂದು ನಾನು ಒತ್ತಾಯಿಸಿದೆ. ಅದೇ ಒತ್ತಾಯದಿಂದಲೇ ನಾನು ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಮಾಜಿಕ ಮಾಧ್ಯಮ ಕಂಪನಿಗಳು ನಮ್ಮ ನಿಯಮಗಳನ್ನು ಪಾಲಿಸಬೇಕು ಮತ್ತು ಸ್ಥಳೀಯವಾಗಿ ನೋಂದಾಯಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದೇ ನನಗೆ ಮುಳುವಾಯಿತು ಎಂದು ಪತ್ರದಲ್ಲಿ ಬರೆದಿದ್ದಾರೆ.
ಸ್ವಭಾವತಃ ನಾನು ಸ್ವಲ್ಪ ಹಠಮಾರಿ. ಆ ಹಠಮಾರಿತನ ಇಲ್ಲದಿದ್ದರೆ ಬಹುಶಃ ಈ ಎಲ್ಲಾ ಸವಾಲುಗಳ ನಡುವೆ ನಾನು ಬಹಳ ಹಿಂದೆಯೇ ಅಧಿಕಾರವನ್ನು ಬಿಟ್ಟುಕೊಡುತ್ತಿದ್ದೆ. ಹಠಮಾರಿ ಧೋರಣೆಯಿಂದಾಗಿ ದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಮಾಜಿಕ ಮಾಧ್ಯಮ ಕಂಪನಿಗಳು ದೇಶದ ನಿಯಮಗಳನ್ನು ಪಾಲಿಸಬೇಕು ಮತ್ತು ಸ್ಥಳೀಯವಾಗಿ ನೋಂದಾಯಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದೆ.
ಇದನ್ನು ಓದಿ: ಜಯದೇವ ಹೃದ್ರೋಗ ಸಂಸ್ಥೆಗೆ ಡಾ.ದಿನೇಶ್ ನಿರ್ದೇಶಕರಾಗಿ ನೇಮಕ
ಈ ಹಿಂದೆ ಲಿಪುಲೇಖ್, ಕಲಾಪಾನಿ ಮತ್ತು ಲಿಂಪಿಯಾಧುರ ನೇಪಾಳಕ್ಕೆ ಸೇರಿವೆ ಎಂದು ನಾನು ಪ್ರತಿಪಾದಿಸಿದ್ದೆ. ಧರ್ಮಗ್ರಂಥಗಳು ಹೇಳುವಂತೆ ಭಗವಾನ್ ಶ್ರೀರಾಮ ಭಾರತದಲ್ಲಿ ಜನಿಸಿಲ್ಲ. ನೇಪಾಳದಲ್ಲಿ ಜನಿಸಿದನೆಂದು ನಾನು ಸಮರ್ಥಿಸಿಕೊಂಡಿದ್ದೆ. ಈ ನಿಲುವುಗಳಲ್ಲಿ ನಾನು ರಾಜಿ ಮಾಡಿಕೊಂಡಿದ್ದರೆ ನಾನು ಅನೇಕ ಸುಲಭ ಮಾರ್ಗಗಳನ್ನು ಆರಿಸಿಕೊಳ್ಳಬಹುದಿತ್ತು. ಲಿಂಪಿಯಾಧುರ ಸೇರಿದಂತೆ ನೇಪಾಳದ ನಕ್ಷೆಯನ್ನು ವಿಶ್ವಸಂಸ್ಥೆಗೆ ಕಳುಹಿಸದಿದ್ದರೆ ನನ್ನ ಜೀವನವು ತುಂಬಾ ವಿಭಿನ್ನವಾಗಿರುತ್ತಿತ್ತು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಚೀನಾ ಪರವಾಗಿದ್ದ ಕೆ.ಪಿಶರ್ಮಾ ಓಲಿ ಬಹಿರಂಗವಾಗಿಯೇ ಭಾರತದ ವಿರುದ್ಧ ಹೇಳಿಕೆ ನೀಡುತ್ತಿದ್ದರು. ಅದರಲ್ಲೂ ರಾಮನ ವಿಚಾರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗಿದ್ದರು. ರಾಮ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಹುಟ್ಟಿದ್ದಾನೆ ಎಂದು ಭಾರತ ಹೇಳುತ್ತಿರುವ ಕಾರಣ ಸೀತೆ ರಾಜಕುಮಾರ ರಾಮನನ್ನು ವಿವಾಹವಾಗಿದ್ದಾಳೆ ಎಂದು ನಾವು ನಂಬಿದ್ದೇವೆ. ಆದರೆ ನಿಜವಾದ ಅಯೋಧ್ಯೆ ನೇಪಾಳದ ಬಿರ್ಗುಂಜ್‍ನ ಪಶ್ಚಿಮ ಭಾಗದಲ್ಲಿರುನ ಥೋರಿ ನಗರದಲ್ಲಿದೆ ಎಂದು ಹೊಸ ಕಥೆ ಕಟ್ಟಿದ್ದರು.





