ದೇಶ- ವಿದೇಶ

ರಾಜೀನಾಮೆಗೆ ಕಾರಣ ನೀಡಿದ ನೇಪಾಳ ಮಾಜಿ ಪ್ರಧಾನಿ ಕೆ.ಪಿ.ಓಲಿ

ಕಠ್ಮಂಡು: ಮಾರ್ಯಾದಾ ಪುರೋಷತ್ತಮ ಶ್ರೀರಾಮನ ಬಗ್ಗೆ ನಾನು ಲಘುವಾಗಿ ಮಾತನಾಡಿದ್ದಕ್ಕೆ ಅಧಿಕಾರ ಕಳೆದುಕೊಳ್ಳುವಂತಾಯಿತು ಎಂದು ನೇಪಾಳದ ಮಾಜಿ ಪ್ರಧಾನಿ ಕೆ.ಪಿ.ಓಲಿ ಅಲವತ್ತುಕೊಂಡಿದ್ದಾರೆ. ಈ ಮೂಲಕ ನೇಪಾಳದ ಪ್ರತಿಭಟನೆಯ ಹಿಂದೆ ಭಾರತದ ಕೈವಾಡವಿದೆ ಎಂದು ಬಿಂಬಿಸಲು ಯತ್ನಿಸಿದ್ದಾರೆ.

ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ತಮ್ಮ ದೇಶದಿಂದ ಪಲಾಯನ ಮಾಡಿದ ನಂತರ, ತಮ್ಮ ಮೊದಲ ಪ್ರತಿಕ್ರಿಯೆ ನೀಡಿರುವ ಅವರು, ಪ್ರಸ್ತುತ ನೇಪಾಳ ಸೇನೆಯ ಶಿವಪುರಿ ಬ್ಯಾರಕ್‍ನಲ್ಲಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ.

ತಮ್ಮ ದೇಶವನ್ನು ಆವರಿಸಿರುವ ಹಿಂಸಾಚಾರ ಅಥವಾ ಪ್ರತಿಭಟನೆಗಳಿಗೆ ಕಾರಣವಾದ ಸಾಮಾಜಿಕ ಮಾಧ್ಯಮ ನಿಷೇಧಕ್ಕೆ ಪ್ರತಿಕ್ರಿಯಿಸದ ಓಲಿ, ಅಯೋಧ್ಯೆಯಲ್ಲಿ ರಾಮನ ಜನನವನ್ನು ವಿರೋಧಿಸಿದ್ದರಿಂದ ಅಧಿಕಾರ ಕಳೆದುಕೊಂಡಿದ್ದೇನೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಅಮೇರಿಕಾದಲ್ಲಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆಪ್ತಮಿತ್ರನ ಹತ್ಯೆ

ಲಿಪುಲೇಖ್, ಕಲಾಪಾನಿ ಮತ್ತು ಲಿಂಪಿಯಾಧುರಾ – ನೇಪಾಳವು ಭಾರತದೊಂದಿಗೆ ವಿವಾದಿತ ಪ್ರದೇಶವೆಂದು ಹೇಳಿಕೊಳ್ಳುವ ವಿಷಯವನ್ನು ಎತ್ತದಿದ್ದರೆ ನಾನು ಅಧಿಕಾರದಲ್ಲಿ ಉಳಿಯುತ್ತಿದ್ದೆ. ಈ ಎರಡೂ ಪ್ರದೇಶಗಳು ನೇಪಾಳಕ್ಕೆ ಸೇರಿವೆ ಎಂದು ನಾನು ಒತ್ತಾಯಿಸಿದೆ. ಅದೇ ಒತ್ತಾಯದಿಂದಲೇ ನಾನು ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಮಾಜಿಕ ಮಾಧ್ಯಮ ಕಂಪನಿಗಳು ನಮ್ಮ ನಿಯಮಗಳನ್ನು ಪಾಲಿಸಬೇಕು ಮತ್ತು ಸ್ಥಳೀಯವಾಗಿ ನೋಂದಾಯಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದೇ ನನಗೆ ಮುಳುವಾಯಿತು ಎಂದು ಪತ್ರದಲ್ಲಿ ಬರೆದಿದ್ದಾರೆ.

ಸ್ವಭಾವತಃ ನಾನು ಸ್ವಲ್ಪ ಹಠಮಾರಿ. ಆ ಹಠಮಾರಿತನ ಇಲ್ಲದಿದ್ದರೆ ಬಹುಶಃ ಈ ಎಲ್ಲಾ ಸವಾಲುಗಳ ನಡುವೆ ನಾನು ಬಹಳ ಹಿಂದೆಯೇ ಅಧಿಕಾರವನ್ನು ಬಿಟ್ಟುಕೊಡುತ್ತಿದ್ದೆ. ಹಠಮಾರಿ ಧೋರಣೆಯಿಂದಾಗಿ ದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಮಾಜಿಕ ಮಾಧ್ಯಮ ಕಂಪನಿಗಳು ದೇಶದ ನಿಯಮಗಳನ್ನು ಪಾಲಿಸಬೇಕು ಮತ್ತು ಸ್ಥಳೀಯವಾಗಿ ನೋಂದಾಯಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದೆ.

ಇದನ್ನು ಓದಿ: ಜಯದೇವ ಹೃದ್ರೋಗ ಸಂಸ್ಥೆಗೆ ಡಾ.ದಿನೇಶ್‌ ನಿರ್ದೇಶಕರಾಗಿ ನೇಮಕ

ಈ ಹಿಂದೆ ಲಿಪುಲೇಖ್, ಕಲಾಪಾನಿ ಮತ್ತು ಲಿಂಪಿಯಾಧುರ ನೇಪಾಳಕ್ಕೆ ಸೇರಿವೆ ಎಂದು ನಾನು ಪ್ರತಿಪಾದಿಸಿದ್ದೆ. ಧರ್ಮಗ್ರಂಥಗಳು ಹೇಳುವಂತೆ ಭಗವಾನ್ ಶ್ರೀರಾಮ ಭಾರತದಲ್ಲಿ ಜನಿಸಿಲ್ಲ. ನೇಪಾಳದಲ್ಲಿ ಜನಿಸಿದನೆಂದು ನಾನು ಸಮರ್ಥಿಸಿಕೊಂಡಿದ್ದೆ. ಈ ನಿಲುವುಗಳಲ್ಲಿ ನಾನು ರಾಜಿ ಮಾಡಿಕೊಂಡಿದ್ದರೆ ನಾನು ಅನೇಕ ಸುಲಭ ಮಾರ್ಗಗಳನ್ನು ಆರಿಸಿಕೊಳ್ಳಬಹುದಿತ್ತು. ಲಿಂಪಿಯಾಧುರ ಸೇರಿದಂತೆ ನೇಪಾಳದ ನಕ್ಷೆಯನ್ನು ವಿಶ್ವಸಂಸ್ಥೆಗೆ ಕಳುಹಿಸದಿದ್ದರೆ ನನ್ನ ಜೀವನವು ತುಂಬಾ ವಿಭಿನ್ನವಾಗಿರುತ್ತಿತ್ತು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಚೀನಾ ಪರವಾಗಿದ್ದ ಕೆ.ಪಿಶರ್ಮಾ ಓಲಿ ಬಹಿರಂಗವಾಗಿಯೇ ಭಾರತದ ವಿರುದ್ಧ ಹೇಳಿಕೆ ನೀಡುತ್ತಿದ್ದರು. ಅದರಲ್ಲೂ ರಾಮನ ವಿಚಾರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗಿದ್ದರು. ರಾಮ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಹುಟ್ಟಿದ್ದಾನೆ ಎಂದು ಭಾರತ ಹೇಳುತ್ತಿರುವ ಕಾರಣ ಸೀತೆ ರಾಜಕುಮಾರ ರಾಮನನ್ನು ವಿವಾಹವಾಗಿದ್ದಾಳೆ ಎಂದು ನಾವು ನಂಬಿದ್ದೇವೆ. ಆದರೆ ನಿಜವಾದ ಅಯೋಧ್ಯೆ ನೇಪಾಳದ ಬಿರ್ಗುಂಜ್‍ನ ಪಶ್ಚಿಮ ಭಾಗದಲ್ಲಿರುನ ಥೋರಿ ನಗರದಲ್ಲಿದೆ ಎಂದು ಹೊಸ ಕಥೆ ಕಟ್ಟಿದ್ದರು.

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

1 hour ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

2 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

3 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

4 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

7 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

8 hours ago