ಪಾಕಿಸ್ತಾನದ ಮಾಜಿ ಅಧ್ಯಕ್ಷ, ನಿವೃತ್ತ ಸೇನಾಧಿಕಾರಿ ಪರ್ವೇಜ್ ಮುಷರಫ್ ಇಂದು ದುಬೈನಲ್ಲಿ ನಿಧನ ಹೊಂದಿದ್ದಾರೆ.
ದುಬೈ: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ (79) ಅವರು ದೀರ್ಘಕಾಲದ ಅನಾರೋಗ್ಯದಿಂದಾಗಿ ಇಂದು ದುಬೈನ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ಭ್ರಷ್ಟಾಚಾರ ಆರೋಪ ಹೊತ್ತಿದ್ದ ಇವರು ಪಾಕಿಸ್ತಾನದಿಂದ ಪಲಾಯನಗೊಂಡು ದುಬೈನಲ್ಲಿ ನೆಲೆಸಿದ್ದರು.
. 78 ವರ್ಷದ ಮುಷರಫ್ ಅವರು ಅಮಿಲೋಡೋಸಿಸ್ (Amyloidosis) ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದರೆನ್ನಲಾಗಿದ್ದು, 2016ರಿಂದ ದುಬೈನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗಷ್ಟೇ ಅವರನ್ನು ಪಾಕಿಸ್ತಾನದ ರಾವಲ್ಪಿಂಡಿ ನಗರದಲ್ಲಿರುವ ಆರ್ಮ್ಡ್ ಫೋರ್ಸಸ್ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಆಸ್ಪತ್ರೆಗೆ ವರ್ಗವಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ.
ಪರ್ವೇಜ್ ಮುಷರಫ್ ಬದುಕುಳಿಯುವುದು ಬಹುತೇಕ ಕಷ್ಟ ಎಂದು ಸಾಕಷ್ಟು ಮೊದಲೇ ಗೊತ್ತಾಗಿತ್ತು. ಮುಷರಫ್ ಅವರ ಆರೋಗ್ಯ ಚೇತರಿಕೆ ಕಾಣುವುದು ಸಾಧ್ಯವಾಗುತ್ತಿಲ್ಲ. ಅವರ ಅಂಗಾಗಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಅವರ ಕುಟುಂಬ ಸದಸ್ಯರು ಜೂನ್ 10ರಂದು ಹೇಳಿಕೆ ನೀಡಿದ್ದರು.
“ವೆಂಟಿಲೇಟರ್ನಲ್ಲಿ ಅವರನ್ನು ಇಡಲಾಗಿಲ್ಲ. ಕಳೆದ 3 ವಾರಗಳಿಂದ ಈ ಕಾಯಿಲೆ ತೀವ್ರ ಸ್ವರೂಪ ಪಡೆದಿದ್ದರಿಂದ ಆಸ್ಪತ್ರೆಯಲ್ಲಿದ್ದಾರೆ. ಚೇತರಿಕೆ ಕಾಣದ ಹಂತದಲ್ಲಿ ಅವರಿದ್ದಾರೆ. ಅಂಗಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಅವರ ನಿತ್ಯ ಜೀವನ ಸುಗಮವಾಗಿರುವಂತೆ ಪ್ರಾರ್ಥಿಸಿ” ಎಂದು ಕುಟುಂಬದವರು ದೇಶವಾಸಿಗಳಿಗೆ ಮನವಿ ಮಾಡಿದ್ದರು.ಪಾಕಿಸ್ತಾನದ ಮಾಜಿ ಸೇನಾ ಮುಖ್ಯಸ್ಥರಾಗಿದ್ದ ಪರ್ವೇಜ್ ಮುಷರಫ್ 2001ರಿಂದ 2008ರಿಂದ ತಮ್ಮ ದೇಶದ ಅಧ್ಯಕ್ಷರಾಗಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…
ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…
ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…
ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…