ದೇಶ- ವಿದೇಶ

ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್‌ ಇನ್ನಿಲ್ಲ

ಪಾಕಿಸ್ತಾನದ ಮಾಜಿ ಅಧ್ಯಕ್ಷ, ನಿವೃತ್ತ ಸೇನಾಧಿಕಾರಿ ಪರ್ವೇಜ್​ ಮುಷರಫ್ ಇಂದು ದುಬೈನಲ್ಲಿ ನಿಧನ ಹೊಂದಿದ್ದಾರೆ.

ದುಬೈ: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್​ ಮುಷರಫ್ (79) ಅವರು ದೀರ್ಘಕಾಲದ ಅನಾರೋಗ್ಯದಿಂದಾಗಿ ಇಂದು ದುಬೈನ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ಭ್ರಷ್ಟಾಚಾರ ಆರೋಪ ಹೊತ್ತಿದ್ದ ಇವರು ಪಾಕಿಸ್ತಾನದಿಂದ ಪಲಾಯನಗೊಂಡು ದುಬೈನಲ್ಲಿ ನೆಲೆಸಿದ್ದರು.

. 78 ವರ್ಷದ ಮುಷರಫ್ ಅವರು ಅಮಿಲೋಡೋಸಿಸ್ (Amyloidosis) ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದರೆನ್ನಲಾಗಿದ್ದು, 2016ರಿಂದ ದುಬೈನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದರುಇತ್ತೀಚೆಗಷ್ಟೇ ಅವರನ್ನು ಪಾಕಿಸ್ತಾನದ ರಾವಲ್ಪಿಂಡಿ ನಗರದಲ್ಲಿರುವ ಆರ್ಮ್ಡ್ ಫೋರ್ಸಸ್ ಇನ್ಸ್​ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಆಸ್ಪತ್ರೆಗೆ ವರ್ಗವಾಗಿದ್ದರುಆದರೆಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ.

ಪರ್ವೇಜ್ ಮುಷರಫ್ ಬದುಕುಳಿಯುವುದು ಬಹುತೇಕ ಕಷ್ಟ ಎಂದು ಸಾಕಷ್ಟು ಮೊದಲೇ ಗೊತ್ತಾಗಿತ್ತುಮುಷರಫ್ ಅವರ ಆರೋಗ್ಯ ಚೇತರಿಕೆ ಕಾಣುವುದು ಸಾಧ್ಯವಾಗುತ್ತಿಲ್ಲಅವರ ಅಂಗಾಗಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಅವರ ಕುಟುಂಬ ಸದಸ್ಯರು ಜೂನ್ 10ರಂದು ಹೇಳಿಕೆ ನೀಡಿದ್ದರು.

ವೆಂಟಿಲೇಟರ್​ನಲ್ಲಿ ಅವರನ್ನು ಇಡಲಾಗಿಲ್ಲಕಳೆದ ವಾರಗಳಿಂದ ಈ ಕಾಯಿಲೆ ತೀವ್ರ ಸ್ವರೂಪ ಪಡೆದಿದ್ದರಿಂದ ಆಸ್ಪತ್ರೆಯಲ್ಲಿದ್ದಾರೆಚೇತರಿಕೆ ಕಾಣದ ಹಂತದಲ್ಲಿ ಅವರಿದ್ದಾರೆಅಂಗಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲಅವರ ನಿತ್ಯ ಜೀವನ ಸುಗಮವಾಗಿರುವಂತೆ ಪ್ರಾರ್ಥಿಸಿ” ಎಂದು ಕುಟುಂಬದವರು ದೇಶವಾಸಿಗಳಿಗೆ ಮನವಿ ಮಾಡಿದ್ದರು.ಪಾಕಿಸ್ತಾನದ ಮಾಜಿ ಸೇನಾ ಮುಖ್ಯಸ್ಥರಾಗಿದ್ದ ಪರ್ವೇಜ್ ಮುಷರಫ್ 2001ರಿಂದ 2008ರಿಂದ ತಮ್ಮ ದೇಶದ ಅಧ್ಯಕ್ಷರಾಗಿದ್ದರು.

andolanait

Recent Posts

ಮಂಡ್ಯದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…

2 hours ago

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

8 hours ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

8 hours ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

8 hours ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

8 hours ago

ದಸರಾ ಬರುತ್ತಿದೆ, ಮೈಸೂರು ಸಿದ್ಧವಾಗುತ್ತಿದೆಯೇ?

ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ  ಮೈಸೂರು ದಸರಾ ಎಂದರೆ ಕೇವಲ ಹತ್ತು…

8 hours ago