Mysore
19
clear sky

Social Media

ಗುರುವಾರ, 29 ಜನವರಿ 2026
Light
Dark

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ವಿಧಿವಶ

ನವದೆಹಲಿ: ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.

ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮನಮೋಹನ್‌ ಸಿಂಗ್‌ ಅವರನ್ನು ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮನಮೋಹನ್‌ ಸಿಂಗ್‌ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ.

2004 ರಿಂದ 2014ರವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಮನಮೋಹನ್‌ ಸಿಂಗ್‌ ಅವರು ಈ ವರ್ಷದ ಆರಂಭದಲ್ಲಿ ರಾಜ್ಯಸಭೆಯಿಂದ ನಿವೃತ್ತರಾಗಿದ್ದರು.

ಅವರು ಈ ಹಿಂದೆ 1998 ರಿಂದ 2004ರವರೆಗೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಹೊಂದಿದ್ದರು. ಸಿಂಗ್‌ ಅವರು ಮೇ22, 2004ರಂದು ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. 2009ರಲ್ಲಿ ಅದೇ ದಿನಾಂಕದಂದು ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸಿದ್ದರು.

ಮನಮೋಹನ್‌ ಸಿಂಗ್‌ ಅವರ ರಾಜಕೀಯ ಜೀವನವು 1991ರಲ್ಲಿ ಅವರು ರಾಜ್ಯಸಭೆಗೆ ಪ್ರವೇಶಿಸಿದಾಗ ಪ್ರಾರಂಭವಾಯಿತು. ಕೇವಲ ನಾಲ್ಕು ತಿಂಗಳ ನಂತರ ಅವರು ಜೂನ್‌ನಲ್ಲಿ ಪಿವಿ ನರಸಿಂಹರಾವ್‌ ಸರ್ಕಾರದಲ್ಲಿ ಕೇಂದ್ರ ಹಣಕಾಸು ಸಚಿವರಾಗಿ ನೇಮಕಗೊಂಡರು. ಇದು ಭಾರತದ ಆರ್ಥಿಕತೆಯಲ್ಲಿ ಪರಿವರ್ತನೆಗೆ ಕಾರಣವಾಗಿತ್ತು.

Tags:
error: Content is protected !!