ನವದೆಹಲಿ: ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.
ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮನಮೋಹನ್ ಸಿಂಗ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮನಮೋಹನ್ ಸಿಂಗ್ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ.
2004 ರಿಂದ 2014ರವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಮನಮೋಹನ್ ಸಿಂಗ್ ಅವರು ಈ ವರ್ಷದ ಆರಂಭದಲ್ಲಿ ರಾಜ್ಯಸಭೆಯಿಂದ ನಿವೃತ್ತರಾಗಿದ್ದರು.
ಅವರು ಈ ಹಿಂದೆ 1998 ರಿಂದ 2004ರವರೆಗೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಹೊಂದಿದ್ದರು. ಸಿಂಗ್ ಅವರು ಮೇ22, 2004ರಂದು ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. 2009ರಲ್ಲಿ ಅದೇ ದಿನಾಂಕದಂದು ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸಿದ್ದರು.
ಮನಮೋಹನ್ ಸಿಂಗ್ ಅವರ ರಾಜಕೀಯ ಜೀವನವು 1991ರಲ್ಲಿ ಅವರು ರಾಜ್ಯಸಭೆಗೆ ಪ್ರವೇಶಿಸಿದಾಗ ಪ್ರಾರಂಭವಾಯಿತು. ಕೇವಲ ನಾಲ್ಕು ತಿಂಗಳ ನಂತರ ಅವರು ಜೂನ್‌ನಲ್ಲಿ ಪಿವಿ ನರಸಿಂಹರಾವ್ ಸರ್ಕಾರದಲ್ಲಿ ಕೇಂದ್ರ ಹಣಕಾಸು ಸಚಿವರಾಗಿ ನೇಮಕಗೊಂಡರು. ಇದು ಭಾರತದ ಆರ್ಥಿಕತೆಯಲ್ಲಿ ಪರಿವರ್ತನೆಗೆ ಕಾರಣವಾಗಿತ್ತು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…