Mysore
23
haze

Social Media

ಗುರುವಾರ, 11 ಡಿಸೆಂಬರ್ 2025
Light
Dark

ಸರ್ಕಾರದ ಹಣ ದುರ್ಬಳಕೆ : ಶ್ರೀಲಂಕಾದ ಮಾಜಿ ಅಧ್ಯಕ್ಷ ಬಂಧನ

Ranil vikram singhe

ಕೊಲೊಂಬೊ : ಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ತಾವು ಅಧ್ಯಕ್ಷರಾಗಿದ್ದಾಗ ಯುನೈಟೆಡ್ ಕಿಂಗ್‌ಡಮ್‌ಗೆ ನೀಡಿದ ವೈಯಕ್ತಿಕ ಭೇಟಿಗಾಗಿ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಕುರಿತು ಹೇಳಿಕೆ ದಾಖಲಿಸಲು ಆಗಮಿಸಿದ್ದರು. ಇದಾದ ನಂತರ ಅವರನ್ನು ಕೊಲಂಬೊದಲ್ಲಿ ಕ್ರಿಮಿನಲ್ ತನಿಖಾ ಇಲಾಖೆ (ಸಿಐಡಿ) ಇಂದು ಬಂಧಿಸಿದೆ.

2022ರಿಂದ 2024ರವರೆಗೆ ಶ್ರೀಲಂಕಾದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ರನಿಲ್ ವಿಕ್ರಮಸಿಂಘೆ, ಸೆಪ್ಟೆಂಬರ್ 2023ರಲ್ಲಿ ವೊಲ್ವರ್‌ಹ್ಯಾಂಪ್ಟನ್ ವಿಶ್ವವಿದ್ಯಾಲಯದಲ್ಲಿ ತಮ್ಮ ಪತ್ನಿ ಪ್ರೊಫೆಸರ್ ಮೈತ್ರೀ ವಿಕ್ರಮಸಿಂಘೆ ಅವರ ಪಿಎಚ್‌ಡಿ ಪದವಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ಸರ್ಕಾರಿ ಹಣವನ್ನು ಬಳಸಿಕೊಂಡಿದ್ದರು ಎಂಬ ಆರೋಪ ಕೇಳಿಬಂದಿದೆ. ಪತ್ನಿಯ ಕಾರ್ಯಕ್ರಮಕ್ಕೆ ತೆರಳಲು ಬಳಸಲಾಗಿದ್ದ ಸರ್ಕಾರಿ ಹಣವನ್ನು ವಾಪಾಸ್ ನೀಡಿದ್ದಾರೆಯೇ ಎಂಬ ಬಗ್ಗೆ ನಡೆಯುತ್ತಿರುವ ತನಿಖೆಯ ಬಳಿಕ ಅನಿರೀಕ್ಷತವಾಗಿ ಅವರನ್ನು ಬಂಧಿಸಲಾಗಿದೆ.

76 ವರ್ಷದ ವಿಕ್ರಮಸಿಂಘೆ ಅವರನ್ನು ಅಪರಾಧ ತನಿಖಾ ಇಲಾಖೆ(ಸಿಐಡಿ) ಪ್ರಧಾನ ಕಚೇರಿಯಲ್ಲಿ ಬಂಧಿಸಲಾಗಿದ್ದು, ಸರ್ಕಾರಿ ಹಣ ದುರುಪಯೋಗದ ತನಿಖೆಗೆ ಸಂಬಂಧಿಸಿದಂತೆ ಹೇಳಿಕೆ ದಾಖಲಿಸಲು ಅವರನ್ನು ಇಲ್ಲಿಗೆ ಕರೆಸಲಾಗಿತ್ತು ಎಂದು ಪೊಲೀಸರು ದೃಢಪಡಿಸಿದ್ದಾರೆ. ಕೊಲಂಬೊ ಫೋರ್ಟ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಲಾದ ಪೊಲೀಸ್ ದಾಖಲೆಗಳ ಪ್ರಕಾರ, ಕ್ಯೂಬಾ ಮತ್ತು ಯುನೈಟೆಡ್ ಸ್ಟೇಟ್ಸ್‌ಗೆ ಅಧಿಕೃತ ಭೇಟಿಗಾಗಿ ರನಿಲ್ ವಿಕ್ರಮಸಿಂಘೆ ತೆರಳಿದ್ದರು. ಅಲ್ಲಿಂದ ವಾಪಾಸ್ ಬರುವಾಗ ಹೆಂಡತಿಯ ಕಾರ್ಯಕ್ರಮಕ್ಕಾಗಿ ಸರ್ಕಾರಿ ಹಣದಲ್ಲಿ ಲಂಡನ್​ಗೆ ಪ್ರಯಾಣ ಬೆಳೆಸಿದ್ದರು. ಆದರೆ, ಅವರ ಅಧಿಕೃತ ಭೇಟಿಯ ಪಟ್ಟಿಯಲ್ಲಿ ಇಂಗ್ಲೆಂಡ್ ಪ್ರವಾಸ ಇರಲಿಲ್ಲ ಎಂದು ತಿಳಿದುಬಂದಿದೆ. ಇದಕ್ಕಾಗಿ ಸುಮಾರು 16.9 ಮಿಲಿಯನ್ ರೂ.ಗಳಷ್ಟು ಸಾರ್ವಜನಿಕ ನಿಧಿಯನ್ನು ಬಳಸಿಕೊಂಡಿದ್ದಾರೆ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.

Tags:
error: Content is protected !!