Ranil vikram singhe
ಕೊಲೊಂಬೊ : ಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ತಾವು ಅಧ್ಯಕ್ಷರಾಗಿದ್ದಾಗ ಯುನೈಟೆಡ್ ಕಿಂಗ್‌ಡಮ್‌ಗೆ ನೀಡಿದ ವೈಯಕ್ತಿಕ ಭೇಟಿಗಾಗಿ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಕುರಿತು ಹೇಳಿಕೆ ದಾಖಲಿಸಲು ಆಗಮಿಸಿದ್ದರು. ಇದಾದ ನಂತರ ಅವರನ್ನು ಕೊಲಂಬೊದಲ್ಲಿ ಕ್ರಿಮಿನಲ್ ತನಿಖಾ ಇಲಾಖೆ (ಸಿಐಡಿ) ಇಂದು ಬಂಧಿಸಿದೆ.
2022ರಿಂದ 2024ರವರೆಗೆ ಶ್ರೀಲಂಕಾದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ರನಿಲ್ ವಿಕ್ರಮಸಿಂಘೆ, ಸೆಪ್ಟೆಂಬರ್ 2023ರಲ್ಲಿ ವೊಲ್ವರ್‌ಹ್ಯಾಂಪ್ಟನ್ ವಿಶ್ವವಿದ್ಯಾಲಯದಲ್ಲಿ ತಮ್ಮ ಪತ್ನಿ ಪ್ರೊಫೆಸರ್ ಮೈತ್ರೀ ವಿಕ್ರಮಸಿಂಘೆ ಅವರ ಪಿಎಚ್‌ಡಿ ಪದವಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ಸರ್ಕಾರಿ ಹಣವನ್ನು ಬಳಸಿಕೊಂಡಿದ್ದರು ಎಂಬ ಆರೋಪ ಕೇಳಿಬಂದಿದೆ. ಪತ್ನಿಯ ಕಾರ್ಯಕ್ರಮಕ್ಕೆ ತೆರಳಲು ಬಳಸಲಾಗಿದ್ದ ಸರ್ಕಾರಿ ಹಣವನ್ನು ವಾಪಾಸ್ ನೀಡಿದ್ದಾರೆಯೇ ಎಂಬ ಬಗ್ಗೆ ನಡೆಯುತ್ತಿರುವ ತನಿಖೆಯ ಬಳಿಕ ಅನಿರೀಕ್ಷತವಾಗಿ ಅವರನ್ನು ಬಂಧಿಸಲಾಗಿದೆ.
76 ವರ್ಷದ ವಿಕ್ರಮಸಿಂಘೆ ಅವರನ್ನು ಅಪರಾಧ ತನಿಖಾ ಇಲಾಖೆ(ಸಿಐಡಿ) ಪ್ರಧಾನ ಕಚೇರಿಯಲ್ಲಿ ಬಂಧಿಸಲಾಗಿದ್ದು, ಸರ್ಕಾರಿ ಹಣ ದುರುಪಯೋಗದ ತನಿಖೆಗೆ ಸಂಬಂಧಿಸಿದಂತೆ ಹೇಳಿಕೆ ದಾಖಲಿಸಲು ಅವರನ್ನು ಇಲ್ಲಿಗೆ ಕರೆಸಲಾಗಿತ್ತು ಎಂದು ಪೊಲೀಸರು ದೃಢಪಡಿಸಿದ್ದಾರೆ. ಕೊಲಂಬೊ ಫೋರ್ಟ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಲಾದ ಪೊಲೀಸ್ ದಾಖಲೆಗಳ ಪ್ರಕಾರ, ಕ್ಯೂಬಾ ಮತ್ತು ಯುನೈಟೆಡ್ ಸ್ಟೇಟ್ಸ್‌ಗೆ ಅಧಿಕೃತ ಭೇಟಿಗಾಗಿ ರನಿಲ್ ವಿಕ್ರಮಸಿಂಘೆ ತೆರಳಿದ್ದರು. ಅಲ್ಲಿಂದ ವಾಪಾಸ್ ಬರುವಾಗ ಹೆಂಡತಿಯ ಕಾರ್ಯಕ್ರಮಕ್ಕಾಗಿ ಸರ್ಕಾರಿ ಹಣದಲ್ಲಿ ಲಂಡನ್ಗೆ ಪ್ರಯಾಣ ಬೆಳೆಸಿದ್ದರು. ಆದರೆ, ಅವರ ಅಧಿಕೃತ ಭೇಟಿಯ ಪಟ್ಟಿಯಲ್ಲಿ ಇಂಗ್ಲೆಂಡ್ ಪ್ರವಾಸ ಇರಲಿಲ್ಲ ಎಂದು ತಿಳಿದುಬಂದಿದೆ. ಇದಕ್ಕಾಗಿ ಸುಮಾರು 16.9 ಮಿಲಿಯನ್ ರೂ.ಗಳಷ್ಟು ಸಾರ್ವಜನಿಕ ನಿಧಿಯನ್ನು ಬಳಸಿಕೊಂಡಿದ್ದಾರೆ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.
ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…