Mysore
31
scattered clouds

Social Media

ಮಂಗಳವಾರ, 31 ಮಾರ್ಚ್ 2026
Light
Dark

ಹೈದರಾಬಾದ್‌ನಲ್ಲಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

ಹೈದರಾಬಾದ್:‌ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ.

2016ರಲ್ಲಿ ನಿಧನರಾದ ಜಯಲಲಿತಾ ಅವರ ಕಾನೂನುಬದ್ಧ ಉತ್ತರಾಧಿಕಾರಿಗಳಿಗೆ ತೆರಿಗೆ ಮೊತ್ತವನ್ನು ಪಾವತಿಸುವಂತೆ ಹಲವಾರು ಬಾರಿ ನೋಟಿಸ್‌ಗಳನ್ನು ನೀಡಲಾಗಿತ್ತು. ಆದರೆ ಇದುವರೆಗೂ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಹಲವು ವರ್ಷಗಳಿಂದ ಸುಮಾರು 1.5 ಕೋಟಿ ರೂಪಾಯಿ ಆಸ್ತಿ ತೆರಿಗೆ ಬಾಕಿ ಇರುವ ಹಿನ್ನೆಲೆಯಲ್ಲಿ ಮನೆಯನ್ನು ಸೀಲ್‌ ಮಾಡಲಾಗಿದೆ.

ಈ ಕುರಿತು ಮಾತನಾಡಿರುವ ಜಿಎಚ್‌ಎಂಸಿ ಆಯುಕ್ತ ಕರ್ಣನ್‌, ಮಾರ್ಚ್.‌31ಕ್ಕೂ ಮೊದಲು ಎಲ್ಲಾ ಪ್ರಮುಖ ಆಸ್ತಿ ತೆರಿಗೆ ಬಾಕಿದಾರರ ವಿರುದ್ಧ ನಾಗರಿಕ ಸಂಸ್ಥೆ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ಹೇಳಿದ್ದಾರೆ.

 

Tags:
error: Content is protected !!