ವಾಷಿಂಗ್ಟನ್: ಅಮೇರಿಕಾದ ಮಾಜಿ ಅಧ್ಯಕ್ಷ ಜೋ ಬೈಡನ್ ಅವರು ಪ್ರಾಸ್ಟೇಟ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
82 ವರ್ಷದ ಜೋ ಬೈಡನ್ ಅವರ ಮೂಳೆಗಳಿಗೆ ಕ್ಯಾನ್ಸರ್ ಹರಡಿದ್ದು, ಬೈಡನ್ ಅವರ ಆರೋಗ್ಯ ಗಂಭೀರ ಸ್ಥಿತಿಗೆ ತಲುಪಿದೆ ಎಂದು ಅವರ ಕಚೇರಿ ಮಾಹಿತಿ ನೀಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಜೋ ಬೈಡನ್ ಅವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಜೋ ಬೈಡನ್ ಅವರಿಗೆ ಪ್ರಾಸ್ಟೇಟ್ ಕ್ಯಾನ್ಸರ್ ಇರುವುದು ಪತ್ತೆಯಾದ ಸುದ್ದಿ ಕೇಳಿ ಮೆಲಾನಿಯಾ ಹಾಗೂ ನನಗೆ ಇಬ್ಬರಿಗೂ ದುಃಖವಾಗಿದೆ. ಬೈಡನ್ ಬೇಗ ಗುಣಮುಖರಾಗಲಿ ಎಂದು ಆಶಿಸುತ್ತೇನೆ ಎಂದು ಹೇಳಿದ್ದಾರೆ.
2021ರಿಂದ 2025ರವರೆಗೆ ಅಮೇರಿಕಾದ ಅಧ್ಯಕ್ಷರಾಗಿದ್ದ ಬೈಡನ್ ಅವರು, 2024ರಲ್ಲಿ ತಮ್ಮ ಆರೋಗ್ಯ ಸ್ಥಿತಿಯನ್ನು ಪರಿಗಣಿಸಿ ಮತ್ತೆ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ನಿರಾಕರಿಸಿದ್ದರು.
ಜೋ ಬೈಡನ್ ಅವರು ಅಮೇರಿಕಾದ ಇತಿಹಾಸದಲ್ಲಿ ಅಧ್ಯಕ್ಷರಾದ ಅತ್ಯಂತ ಹಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.