ನ್ಯೂಯಾರ್ಕ್: ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಗುಂಡೇಟಾಗಿದೆ. ಬಟ್ಲರ್‌ನ ಪೆನ್ಸಿಲ್ವೇನಿಯಾದಲ್ಲಿ ಶನಿವಾರ(ಜು.13) ರ್ಯಾಲಿ ನಡೆಸುತ್ತಿದ್ದ ವೇಳೆ ಗುಂಡಿನ ದಾಳಿಯಾಗಿದ್ದು, ಟ್ರಂಪ್‌ನನ್ನು ಹತ್ಯೆ ಮಾಡಲು ಯತ್ನಿಸಲಾಗುತ್ತಿದೆ ಎಂದು ವರದಿಯಾಗುತ್ತಿದೆ.
ಬಂದೂಕುದಾರಿ ಟ್ರಂಪ್‌ನತ್ತ ಶೂಟ್ ಮಾಡಿದ್ದರಿಂದ ಕಿವಿಗೆ ತಗುಲಿ ಕಿವಿ ಹಾಗೂ ಮುಖದಲ್ಲಿ ರಕ್ತ ಸುರಿದಿದ್ದು, ಸ್ವಲ್ಪದರಲ್ಲೇ ಟ್ರಂಪ್ ಪಾರಾಗಿದ್ದು, ತಕ್ಷಣ ಭದ್ರತಾ ಸಿಬ್ಬಂದಿಗಳು ರಕ್ಷಣೆಗೆ ಧಾವಿಸಿದ್ದಾರೆ.
ಟ್ರಂಪ್ ಅವರು ಬೆಂಬಲಿಗರ ದೊಡ್ಡ ಗುಂಪಿನ ನಡುವೆ ಭಾಷಣ ಮಾಡುತ್ತಿದ್ದಾಗ ಗುಂಡಿನ ದಾಳಿ ನಡೆದಿದ್ದು, ಘಟನೆ ನಡೆದ ಕೂಡಲೇ ಟ್ರಂಪ್ ಕೈ ಎತ್ತಿ ಮುಷ್ಠಿ ಹಿಡಿದು ಸಾರ್ವಜನಿಕರತ್ತ ತಮ್ಮ ವಿರೋಧ ವ್ಯಕ್ತಪಡಿಸಿದರು. ಈ ಘಟನೆ ಅಮೆರಿಕಾ ರಾಜಕೀಯ ನಾಯಕರನ್ನು ದಿಗ್ಭ್ರಾಂತಗೊಳಿಸಿದೆ.
ಗುಂಡಿನ ದಾಳಿಯಾದ ತಕ್ಷಣ ಭದ್ರತಾ ಸಿಬ್ಬಂದಿ ಸುತ್ತುವರೆದು ರಕ್ಷಿಸಿ ವೇದಿಕೆಯಿಂದ ಹೊರಕರೆತಂದರು.
ಗುಂಡಿನ ದಾಳಿಕೋರನನ್ನು ಟ್ರಂಪ್ ಸಿಬ್ಬಂದಿ ಹತ್ಯೆ ಮಾಡಿದ್ದು, ಶೂಟರ್ ಜೊತೆಗೆ ಮತ್ತೊಬ್ಬ ಸಾವಿಗೀಡಾಗಿದಾರೆ ಎಂದು ವರದಿಯಾಗಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…