ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್ ಫ್ರಾನ್ಸಿಸ್ಕೊದಲ್ಲಿರುವ ಭಾರತದ ರಾಯಭಾರ ಕಚೇರಿ (ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾ) ಎಕ್ಸ್ ಖಾತೆಯ ಮೂಲಕ ಖಚಿತಪಡಿಸಿದೆ.
ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಬರ್ಕ್ಲಿ (UC Berkeley)ಯಲ್ಲಿ ಎಂ.ಎಸ್ಸಿ (ಕೆಮಿಕಲ್ ಅಂಡ್ ಬಯೋಮಾಲಿಕ್ಯುಲರ್ ಎಂಜಿನಿಯರಿಂಗ್ / ಪ್ರೊಡಕ್ಟ್ ಡೆವಲಪ್‌ಮೆಂಟ್ ಪ್ರೋಗ್ರಾಂ) ವ್ಯಾಸಂಗ ಮಾಡುತ್ತಿದ್ದ ಸಾಕೇತ್, ಫೆಬ್ರವರಿ 9ರಿಂದ ಕಾಣೆಯಾಗಿದ್ದರು.
ಇದರ ಬೆನ್ನಲ್ಲೇ, ಅವರ ಪಾಸ್‌ಪೋರ್ಟ್ ಮತ್ತು ಲ್ಯಾಪ್‌ಟಾಪ್ ಇದ್ದ ಬ್ಯಾಗ್ ಪಾರ್ಕ್ ಹಿಲ್ ನೈಬರ್‌ಹುಡ್ ನಿವಾಸದ ಬಳಿ ಪತ್ತೆಯಾಗಿತ್ತು ಎಂದು ಬರ್ಕ್ಲಿ ಸ್ಕ್ಯಾನರ್ ನ್ಯೂಸ್ ಪೋರ್ಟಲ್ ವರದಿ ಮಾಡಿತ್ತು.
ಸ್ಥಳೀಯ ಪೊಲೀಸರು ಮತ್ತು ಡೈವ್ ತಂಡದಿಂದ ಫೆಬ್ರವರಿ 14ರಂದು ಲೇಕ್ ಅಂಜಾ (Lake Anza) ಬಳಿ ಮೃತದೇಹವನ್ನು ವಶಪಡಿಸಿಕೊಳ್ಳಲಾಯಿತು. ಇದನ್ನು ಭಾರತೀಯ ಕಾನ್ಸುಲೇಟ್ ದೃಢಪಡಿಸಿದೆ.
ಕಾನ್ಸುಲೇಟ್ ಹೇಳಿಕೆಯ ಪ್ರಕಾರ ಸ್ಥಳೀಯ ಆಡಳಿತದೊಂದಿಗೆ ಸಂವಹನ ಸಾಧಿಸಿ, ಸಾಕೇತ್ ಅವರ ಮೃತದೇಹವನ್ನು ಆದಷ್ಟು ಬೇಗ ಭಾರತಕ್ಕೆ ಕಳುಹಿಸಲು ಬೇಕಿರುವ ಎಲ್ಲ ನೆರವು ನೀಡಲಾಗುತ್ತಿದೆ. ನೊಂದಿರುವ ಕುಟುಂಬದ ಜೊತೆಗೆ ರಾಯಭಾರ ಕಚೇರಿ ನಿಲ್ಲುತ್ತದೆ ಎಂದು ತಿಳಿಸಿದೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…