ಜೈಪುರ: ಪ್ರಾಥಮಿಕ ಶಾಲಾ ಕಟ್ಟಡದ ಮೇಲ್ಛಾವಣಿ ಕುಸಿದು ನಾಲ್ವರು ಮಕ್ಕಳು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಝಲಾವರ್‌ನಲ್ಲಿ ನಡೆದಿದೆ.
ಝಲಾವರ್‌ನಲ್ಲಿರುವ ಪಿಪ್ಲೋಡಿ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದಿದ್ದು, ಘಟನೆಯಲ್ಲಿ ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಸುಮಾರು 60ಕ್ಕೂ ಹೆಚ್ಚು ಮಕ್ಕಳು ಅವಶೇಷಗಳಡಿ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಮೃತಪಟ್ಟ ಮಕ್ಕಳ ಶವಗಳನ್ನು ಹೊರತೆಗೆಯಲಾಗಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಇನ್ನು ದುರಂತದಲ್ಲಿ ಮೃತಪಟ್ಟ ಮಕ್ಕಳಿಗೆ ರಾಜಸ್ಥಾನ ಸಿಎಂ ಭಜನ್‌ಲಾಲ್ ಶರ್ಮಾ ಎಕ್ಸ್‌ನಲ್ಲಿ ಸಂತಾಪ ಸೂಚಿಸಿದ್ದಾರೆ. ಈ ಈ ಘಟನೆ ನಿಜಕ್ಕೂ ಹೃದಯವಿದ್ರಾವಕವಾದದ್ದು ಎಂದು ಕಂಬನಿ ಮಿಡಿದಿದ್ದಾರೆ. ಅಲ್ಲದೇ ಗಾಯಗೊಂಡ ಮಕ್ಕಳಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.





