Mysore
28
light rain

Social Media

ಗುರುವಾರ, 11 ಜೂನ್ 2026
Light
Dark

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ , ಮನ್ಸೂರ್ ಅಲಿ ಖಾನ್ ಹಾಗೂ ಬಿಜೆಪಿಯ ಪ್ರೊ. ಎಂ ನಾಗರಾಜ್ ಅವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಣದಲ್ಲಿದ್ದ ಪಕ್ಷೇತರ ಅಭ್ಯರ್ಥಿ ನಾಮಪತ್ರ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಕಣದಲ್ಲಿದ್ದಾಗ 4 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ತಿಳಿಸಿದ್ದಾರೆ.

ರಾಜ್ಯಸಭಾ ಅಭ್ಯರ್ಥಿಗಳಾಗಿದ್ದ ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡ, ಎಂ.ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯ ಈರಣ್ಣ ಕಡಾಡಿ ಹಾಗೂ ನಾರಾಯಣ ಸಾ.ಬಾಂಡೆಗೆ ಅವರ ಅಧಿಕಾರವಧಿ ಮುಗಿದ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ಎದುರಾಗಿತ್ತು.

ಕೊನೆ ಕ್ಷಣದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರಿಗೆ ಬಿಜೆಪಿ ಟಿಕೆಟ್ ನೀಡಲು ನಿರಾಕರಿಸಿತ್ತು. ಅಚ್ಚರಿ ಎಂಬಂತೆ ಆರ್. ಎಸ್.ಎಸ್ ಹಿನ್ನಲೆಯ ಪ್ರೊ.ಎಂ.ನಾಗರಾಜ್ ಅವರಿಗೆ ಟಿಕೆಟ್ ಘೋಷಣೆಯಾಗಿತ್ತು.

Tags:
error: Content is protected !!