ದೇಶ- ವಿದೇಶ

ಕೇರಳದಲ್ಲಿ ಗುಡ್ಡ ಕುಸಿತ: ನಾಲ್ವರ ದುರ್ಮರಣ

ಕೇರಳ: 2019ರಲ್ಲಿ ಸಮೀಪಿಸಿದ್ದ ಗುಡ್ಡ ಕುಸಿತ ಮತ್ತೊಮ್ಮೆ ವಯನಾಡಿನಲ್ಲಿ ಸಂಭವಿಸಿದೆ. ಕೇರಳ ರಾಜ್ಯದ ವಯನಾಡ್‌ ಜಿಲ್ಲೆಯ ಮೇಪ್ಪಾಡಿ ಬಳಿಯ ಚುರ್ಲಾಮಲಾ ಬಳಿ ವಿಪರೀತ ಮಳೆಯಿಂದಾಗಿ ಗುಡ್ಡ ಕುಸಿತ ಸಂಭವಿಸಿದೆ.

ಈ ಗುಡ್ಡ ಕುಸಿತದಲ್ಲಿ ಒಂದು ಮಗು ಸೇರಿದಂತೆ ನಾಲ್ವರು ಮರಣ ಹೊಂದಿದ್ದಾರೆ.

ಮುಂಡಕ್ಕಾಯ್‌, ಚುರ್ಲಮಲಾ, ಅತ್ತಮಲಾ ಕಡೆಗಳಲ್ಲಿ ವಿಪರೀತ ಭೂಕುಸಿತ ಉಂಟಾದ ಪರಿಣಾಮ ಎಲ್ಲಾ ಕಡೆ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ. ಭೂಕುಸಿತದಲ್ಲಿ ಸಿಲುಕಿರುವ ಜನರನ್ನು ವಾಯ ಮಾರ್ಗದ ಮೂಲಕ ರಕ್ಷಿಸುವ ಕೆಲಸ ಮಾಡಲಾಗುವ ಬಗ್ಗೆ ಜಿಲ್ಲಾ ಹಂತದ ಅಧಿಕಾರಿಗಳು ಯೋಜನೆ ರೂಪಿಸುತ್ತಿದ್ದಾರೆ ಎಂದು ಶಾಸಕ ಟಿ. ಸಿದ್ಧಿಕ್‌ ವೀಡಿಯೋ ಕಾನ್ಫರೆನ್ಸ್‌ ಮೂಲಕ ಮಾಹಿತಿ ನೀಡಿದ್ದಾರೆ.

ಭೂಕುಸಿತಕ್ಕೆ ಸಿಲುಕಿರುವವರ ರಕ್ಷಣೆಗಾಗಿ ವಾಯುಪಡೆಯ ಎರಡು ಎಲಿಕಾಪ್ಟರ್‌ಗಳು ಕಾರ್ಯಕೈಗೊಳ್ಳಲಿವೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್‌ ತಿಳಿಸಿದ್ದಾರೆ.

2019ರಲ್ಲಿ ಇದೇ ರೀತಿ ವಯನಾಡಿನ ಮೆಪ್ಪಾಡಿ ಬಳಿ ಗುಡ್ಡ ಕುಸಿದಿತ್ತು. ಇದಾದ ಬಳಿಕ ಈಗ ಮತ್ತೊಮ್ಮೆ ಗುಡ್ಡ ಕುಸಿದಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

2 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

2 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

2 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

2 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

2 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

2 hours ago