ದೇಶ- ವಿದೇಶ

ಉಕ್ಕು ಉದ್ಯಮಕ್ಕೆ ಮತ್ತಷ್ಟು ಬಲ ; ₹11,887 ಕೋಟಿ ಹೂಡಿಕೆ

ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2 ಅನ್ನು ಪ್ರಾರಂಭಿಸಿದೆ. ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಮಂತ್ರಿಗಳಾದ ಎಚ್.ಡಿ. ಕುಮಾರಸ್ವಾಮಿ ಅವರು ಈ ಯೋಜನೆಗೆ ಚಾಲನೆ ನೀಡಿದ್ದು, ಇದು ಹೆಚ್ಚಿನ ಮೌಲ್ಯದ ಉತ್ಪಾದನೆಯನ್ನು ಹೆಚ್ಚಿಸಲು ಹಾಗೂ ಗುಣಮಟ್ಟದ, ವಿವಿಧ ಶ್ರೇಣಿಗಳ ಉಕ್ಕಿನ ಆಮದು ಅವಲಂಬನೆ ಕಡಿಮೆ ಮಾಡುವ ಉದ್ದೇಶದಿಂದ ಈ ಯೋಜನೆ ಪರಿಣಾಮಕಾರಿ ಎಂದು ಹೇಳಿದ್ದಾರೆ.

ದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆದ ಪಿಎಲ್ಐ 1.2 ಯೋಜನೆಗೆ ಚಾಲನೆ ನೀಡಿದ ನಂತರ ಮಾತನಾಡಿದ ಕೇಂದ್ರ ಸಚಿವರ ಸಮಕ್ಷಮದಲ್ಲಿ ಉಕ್ಕು ಉದ್ಯಮದ ಪ್ರಮುಖ ಪಾಲುದಾರರೊಂದಿಗೆ ತಿಳಿವಳಿಕೆ ಒಪ್ಪಂದಗಳಿಗೆ (MoU) ಸಹಿ ಹಾಕಲಾಯಿತು. ಇದು ಭಾರತದ ಉಕ್ಕು ಉದ್ಯಮದ ದೀರ್ಘಕಾಲೀನ ಬೆಳವಣಿಗೆಯ ನಿರೀಕ್ಷೆಗಳಲ್ಲಿ ಬಲವಾದ ವಿಶ್ವಾಸವನ್ನು ಮೂಡಿಸುತ್ತದೆ ಎಂದು ಸಚಿವರು ಹೇಳಿದರು.

ಪಿಎಲ್ಐ 1.2 ಯೋಜನೆ ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಕೋನಕ್ಕೆ ಸಂಪೂರ್ಣವಾಗಿ ಹೊಂದಿಕೆಯಾಗುವ ಹಾಗೂ ಉಕ್ಕು ಉದ್ಯಮದಲ್ಲಿ ಸ್ವಾವಲಂಭನೆ ಸಾಧಿಸುವ ದಿಕ್ಕಿನಲ್ಲಿ ದೃಢವಾದ ಹೆಜ್ಜೆಯಾಗಿದೆ. ಅಲ್ಲದೆ, ಜಾಗತಿಕವಾಗಿ ಸ್ಪರ್ಧಾತ್ಮಕ ಶಕ್ತಿಯನ್ನು ಹೊಂದಿ ದೇಶದಲ್ಲಿ ಪೂರಕ ವ್ಯವಸ್ಥೆಯನ್ನು ನಿರ್ಮಿಸುವತ್ತ ಒಂದು ನಿರ್ಣಾಯಕ ಉಪಕ್ರಮವಾಗಿದೆ ಎಂದು ಅವರು ಒತ್ತಿ ಹೇಳಿದರು.

ಈ ಯೋಜನೆಯು ಮೇಕ್ ಇನ್ ಇಂಡಿಯಾ ಮತ್ತು ಆತ್ಮನಿರ್ಭರ ಭಾರತಕ್ಕೆ ಅನುಗುಣವಾಗಿದ್ದು, ರಾಷ್ಟ್ರೀಯ ಆದ್ಯತೆಗಳಿಗೆ ತಕ್ಕಂತೆ ಉಕ್ಕು ಉದ್ಯಮವನ್ನು ಮುನ್ನಡೆಸುತ್ತದೆ ಎಂದು ಅವರು ಪ್ರತಿಪಾದಿಸಿದರು.

ಪಿಎಲ್ಐ ಯೋಜನೆ 1.2ರ ಅಡಿಯಲ್ಲಿ 85 ಒಪ್ಪಂದಗಳಿಗೆ 55 ಕಂಪನಿಗಳೊಂದಿಗೆ ತಿಳಿವಳಿಕೆ ಪತ್ರಗಳಿಗೆ ಸಹಿ ಹಾಕಲಾಗಿದ್ದು, ₹11,887 ಕೋಟಿ ಹೂಡಿಕೆ ಮಾಡಲಾಗಿದೆ. ಈ ಯೋಜನೆಗಳು 2031ರ ಹಣಕಾಸು ವರ್ಷದ ವೇಳೆಗೆ 8.7 ಮಿಲಿಯನ್ ಟನ್ ವಿಶೇಷ ಉಕ್ಕಿನ ಉತ್ಪಾದನಾ ಸಾಮರ್ಥ್ಯವನ್ನು ಹೊಂದುವ ನಿರೀಕ್ಷೆಯಿದೆ. ಇದು ಶಕ್ತಿಶಾಲಿ ಉಕ್ಕು, ಮಿಶ್ರಲೋಹ ಮತ್ತು ಸ್ಟೇನ್‌ಲೆಸ್ ಸ್ಟೀಲ್‌ಗಳು, ಲೇಪಿತ ಉತ್ಪನ್ನಗಳು ಮತ್ತು ವಿವಿಧ ರಾಷ್ಟ್ರೀಯ ವ್ಯೂಹಾತ್ಮಕ ವಲಯಗಳಿಗೆ ಅಗತ್ಯವಿರುವ ಅತ್ತುತ್ತಮ ಶ್ರೇಣಿಯ ಉನ್ನತ ಗುಣಮಟ್ಟದ ಉಕ್ಕು ಪೂರೈಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ಅವರು ಹೇಳಿದರು.

ಆಟೋಮೊಬೈಲ್, ರೇಲ್ವೆ, ರಕ್ಷಣೆ, ವಿದ್ಯುತ್ ವಲಯಗಳ ಉಪಕರಣಗಳ ತಯಾರಿಕೆಗೆ ಮತ್ತು ಏರೋಸ್ಪೇಸ್ ಸೇರಿದಂತೆ ವಿವಿಧ ಪ್ರಮುಖ ಕ್ಷೇತ್ರಗಳಿಗೆ ಅಗತ್ಯವಾದ ವಿಶೇಷ ಉಕ್ಕಿನ ಮೂಪಕ ತಮ್ಮ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವತ್ತ ಅಗತ್ಯ ಸಹಕಾರ, ಸಹಯೋಗ ನೀಡುತ್ತದೆ. ಕೈಗಾರಿಕಾ ಬೇಡಿಕೆಗೆ ತಕ್ಕಂತೆ ಪಿಎಲ್ಐ ಯೋಜನೆಯ ಮೂರನೇ ಸುತ್ತನ್ನು ಪ್ರಾರಂಭಿಸಲಾಗಿದೆ ಎಂದು ಅವರು ಹೇಳಿದರು.

ಯೋಜನೆಯ ವಿಶಾಲ ಪರಿಣಾಮದ ಕುರಿತು ಮಾತನಾಡಿದ ಸಚಿವರು; ಪಿಎಲ್ಐ 1.2 ದೇಶೀಯ ಉತ್ಪಾದನೆಯನ್ನು ಪ್ರೋತ್ಸಾಹಿಸುವ ಮೂಲಕ ವಿದೇಶಿ ವಿನಿಮಯವನ್ನು ಸಂರಕ್ಷಿಸುವ ಮೂಲಕ ಭಾರತವನ್ನು ಸುಧಾರಿತ ಉಕ್ಕಿನ ವಿಶ್ವಾಸಾರ್ಹ ಜಾಗತಿಕ ಪೂರೈಕೆದಾರನಾಗಿ ಹೊರಹೊಮ್ಮಿಸುವ ದಿಕ್ಕಿನಲ್ಲಿ ರಚನಾತ್ಮಕವಾಗಿ ಕೆಲಸ ಮಾಡುತ್ತದೆ ಎಂದರು ಅವರು ಪಾಲುದಾರರಿಗೆ ತಿಳಿಸಿದರು.

ಹಿಂದಿನ ಸುತ್ತಿನ ಎರಡು ಪಿಎಲ್ಐ ಯೋಜನೆಗಳು ಉಕ್ಕು ಉದ್ಯಮದ ನಿರೀಕ್ಷೆಗಳನ್ನು ಪೂರೈಸಿ ರಾಷ್ಟ್ರಕ್ಕೆ ಅನುಕೂಲ ಮಾಡಿವೆ. ಅದರಂತೆಯೇ ಪಿಎಲ್ಐ 1.0 ಮತ್ತು 1.1ರಲ್ಲಿ, ₹43,874 ಕೋಟಿಯಷ್ಟು ನಿಗದಿತ ಹೂಡಿಕೆಗಳು ಈಗಾಗಲೇ ಗುರಿ ಸಾಧಿಸಿವೆ. ಪಿಎಲ್ಐ 1.2 ಯೋಜನೆ ಹಿಂದಿನ ಫಲಿತಾಂಶ ಉತ್ತೇಜನಕಾರಿ ಮುನ್ನಡೆಯಿಂದ ಪ್ರೇರಿತಗೊಂಡು ರೂಪಿಸಲ್ಪಟ್ಟಿದೆ. ದೇಶೀಯ ಉಕ್ಕಿನ ವ್ಯವಸ್ಥೆಯನ್ನು ಬಲಪಡಿಸುವ ಮತ್ತು ಸಂಪೂರ್ಣ ಮೌಲಿಕ ಸರಪಳಿಯನ್ನು ಗಟ್ಟಿಗೊಳಿಸುವ ಕೆಲಸವನ್ನು ಅದು ಮಾಡುತ್ತದೆ ಎಂದು ಸಚಿವರು ವಿವರಿಸಿದರು.

ಈ ಸಂದರ್ಭದಲ್ಲಿ ಉಕ್ಕು ಸಚಿವಲಾಯದ ಕಾರ್ಯದರ್ಶಿ ಸೇರಿದಂತೆ ಉನ್ನತ ಅಧಿಕಾರಿಗಳು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

1 hour ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

3 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

3 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

4 hours ago

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

9 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

9 hours ago