ದೇಶ- ವಿದೇಶ

ಜಿ20 ಶೃಂಗಸಭೆ ಅಧ್ಯಕ್ಷತೆ ಭಾರತಕ್ಕೆ ಹಸ್ತಾಂತರ

ಬಾಲಿ: ಭಾರತ ಡಿಸೆಂಬರ್‌ ಒಂದರಿಂದ ಅಧಿಕೃತವಾಗಿ ಜಿ20 ಶೃಂಗಸಭೆಯ ಅಧ್ಯಕ್ಷ ಸ್ಥಾನ ಅಲಂಕರಿಸಲಿದೆ. ಬುಧವಾರ ನಡೆದ ಬಾಲಿ ಶೃಂಗಸಭೆಯ ಸಮಾರೋಪ ಸಮಾರಂಭದಲ್ಲಿ ಇಂಡೋನೇಷ್ಯಾದ ಅಧ್ಯಕ್ಷ ಜೊಕೊ ವಿಡೊಡೊ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಿ20 ಶೃಂಗಸಭೆಯ ಅಧ್ಯಕ್ಷ ಸ್ಥಾನವನ್ನು ಹಸ್ತಾಂತರ ಮಾಡಿದರು. ಡಿಸೆಂಬರ್‌ 1 ರಿಂದ ಭಾರತ ಅಧಿಕೃತವಾಗಿ ಜಿ20ಯ ಅಧ್ಯಕ್ಷ ಸ್ಥಾನದಲ್ಲಿ ಆಸೀನವಾಗಲಿದೆ.

“” ಬಾಲಿಯ ಈ ಪ್ರಾಚೀನ ಮತ್ತು ಮಹಾನ್ ಭೂಮಿಯಲ್ಲಿ ಜಿ 20 ಅಧ್ಯಕ್ಷ ಸ್ಥಾನವನ್ನು ಏರಿದ್ದು, ವೈಯಕ್ತಿಕವಾಗಿ ನನಗೆ ಹಾಗೂ ಭಾರತಕ್ಕೆ ಅದೃಷ್ಟದ ಕ್ಷಣ ಎಂದು ಭಾವಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಈ ವೇಳೆ ಹೇಳಿದರು. ಭಾರತದ ಮುಂಬರುವ ಜಿ 20 ಅಧ್ಯಕ್ಷ ಸ್ಥಾನವು ಡಿಜಿಟಲ್ ವಿಭಜನೆಗೆ ಸೇತುವೆಯಾಗಿ ಕೆಲಸ ಮಾಡುತ್ತದೆ. ವಿಶೇಷವಾಗಿ ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಮತ್ತು ಡಿಜಿಟಲ್ ತಂತ್ರಜ್ಞಾನಗಳು ಮತ್ತು ರೂಪಾಂತರದಿಂದ ಹೆಚ್ಚಿನ ಪ್ರಯೋಜನಗಳನ್ನು ಖಾತರಿಪಡಿಸುವುದರ ಮೇಲೆ ಕೇಂದ್ರೀಕರಿಸುತ್ತದೆ ʼʼ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದರು.

ಬಾಲಿಯಲ್ಲಿ ನಡೆದ ಜಿ 20 ಶೃಂಗಸಭೆಯಲ್ಲಿ ಡಿಜಿಟಲ್ ರೂಪಾಂತರದ ಕುರಿತು ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಮುಂದಿನ ದಶಕದಲ್ಲಿ ಡಿಜಿಟಲ್ ಸೇರ್ಪಡೆಗಾಗಿ ಒಟ್ಟಾಗಿ ಕೆಲಸ ಮಾಡುವುದಾಗಿ ಪ್ರತಿಜ್ಞೆ ಮಾಡುವಂತೆ ಇತರ ಜಿ 20 ನಾಯಕರನ್ನು ಒತ್ತಾಯಿಸಿದರು.

“ಅಭಿವೃದ್ಧಿಗಾಗಿ ಡೇಟಾ” ತತ್ವವು ನಮ್ಮ ಅಧ್ಯಕ್ಷತೆಯ ಒಟ್ಟಾರೆ ವಿಷಯವಾದ ‘ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ’ದ ಅವಿಭಾಜ್ಯ ಅಂಗವಾಗಿರುತ್ತದೆ” ಎಂದು ಅವರು ಹೇಳಿದರು.

andolanait

Recent Posts

ಕೋವಿಡ್‌ ಹಗರಣ: ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆಯ ಅಂತಿಮ ವರದಿಯನ್ನು ನಿವೃತ್ತ ನ್ಯಾಯಮೂರ್ತಿ ಮೈಕೆಲ್‌…

42 mins ago

ಚಾಮುಂಡಿಬೆಟ್ಟಕ್ಕೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಭೇಟಿ

ಮೈಸೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಇಂದು ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಅವರು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ದೇವಿಯ…

1 hour ago

ಹೊಸ ವರ್ಷದ ಸಂಭ್ರಮ: ಚಾಮುಂಡಿಬೆಟ್ಟಕ್ಕೆ ಹರಿದು ಬಂದ ಭಕ್ತಸಾಗರ

ಮೈಸೂರು: 2026ರ ಮೊದಲ ದಿನವಾದ ಇಂದು ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದುಬರುತ್ತಿದೆ. ಹೊಸ ವರ್ಷದ ಅಂಗವಾಗಿ…

1 hour ago

ಮೈಸೂರು: ನಿರಾಶ್ರಿತರಿಗೆ ಹೊದಿಕೆ ನೀಡುವ ಮೂಲಕ ಹೊಸ ವರ್ಷಾಚರಣೆ

ಮೈಸೂರು: ಹೊಸ ವರ್ಷ ಎಂದು ಮೋಜು ಮಸ್ತಿ ಮಾಡದೇ ರಸ್ತೆ ಬದಿಯ ನಿರಾಶ್ರಿತರಿಗೆ ಹೂದಿಕೆಗಳನ್ನು ನೀಡುವ ಮೂಲಕ ಯುವಕರ ತಂಡ…

2 hours ago

ಹೊಸ ವರ್ಷದ ಸಂಭ್ರಮ: ಯೋಗನರಸಿಂಹಸ್ವಾಮಿ ದೇವಸ್ಥಾನದಲ್ಲಿ ಭಕ್ತರಿಗೆ ಲಡ್ಡು ವಿತರಣೆ

ಮೈಸೂರು: ನೂತನ ವರ್ಷವನ್ನು ಮೈಸೂರಿನ ವಿಜಯನಗರದಲ್ಲಿರುವ ಯೋಗ ನರಸಿಂಹಸ್ವಾಮಿ ದೇವಾಲಯದಲ್ಲಿ ಭಕ್ತರಿಗೆ ತಿರುಪತಿ ಮಾದರಿ ಲಡ್ಡು ವಿತರಿಸುವ ಮೂಲಕ ಸ್ವಾಗತಿಸಲಾಯಿತು.…

3 hours ago

ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು, ದೇಶ ಹಾಗೂ ವಿಶ್ವದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಅಷ್ಟೇ ಅಲ್ಲದೇ…

3 hours ago