ಹೊಸದಿಲ್ಲಿ : ಭಾರತ-ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿಯನ್ನು ಶಾಂತಗೊಳಿಸುವಂತೆ ಜಿ7 ರಾಷ್ಟ್ರಗಳು ಒತ್ತಾಯಿಸಿವೆ.
ಪರಮಾಣು ಶಸ್ತ್ರಸಜ್ಜಿತ ನೆರೆಹೊರೆಯವರ ನಡುವಿನ ಮಿಲಿಟರಿ ಮುಖಾಮುಖಿ ನಿರಂತರವಾಗಿ ಉಲ್ಬಣಗೊಳ್ಳುತ್ತಿರುವ ಮಧ್ಯೆ ಜಿ.7 ರಾಷ್ಟ್ರಗಳ ಗುಂಪು ಈ ಕರೆ ನೀಡಿವೆ.
ಭಾರತ ಮತ್ತು ಪಾಕಿಸ್ತಾನಗಳು ಮಾತುಕತೆಯ ಮೂಲಕ ತಮ್ಮ ಮಿಲಿಟರಿ ಸಂಘರ್ಷದ ಉಲ್ಬಣವನ್ನು ತಕ್ಷಣವೇ ಕಡಿಮೆ ಮಾಡಬೇಕು ಎಂದು ಒತ್ತಾಯಿಸಿರುವ ಜಿ7 ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಲೇ ಇರುತ್ತೇವೆ ಮತ್ತು ತ್ವರಿತ ಮತ್ತು ಶಾಶ್ವತ ರಾಜತಾಂತ್ರಿಕ ಪರಿಹಾರಕ್ಕಾಗಿ ನಮ್ಮ ಬೆಂಬಲವೂ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿವೆ.
ಕೆನಡಾ, ಫ್ರಾನ್ಸ್, ಜರ್ಮನಿ, ಇಟಲಿ, ಜಪಾನ್, ಯುಕೆ ಮತ್ತು ಯುಎಸ್‌ನ ಜಿ7 ವಿದೇಶಾಂಗ ಮಂತ್ರಿಗಳು ಮತ್ತು ಯುರೋಪಿಯನ್ ಒಕ್ಕೂಟದ ಉನ್ನತ ಪ್ರತಿನಿಧಿಗಳು ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸುತ್ತೇವೆ ಹೇಳಿಕೆಯಲ್ಲಿ ತಿಳಿಸಿದೆ.
ಇದನ್ನೂ ಓದಿ:- ಡ್ರೋನ್‌ಯುದ್ಧ : ಸೋಲಿನ ಭೀತಿಯಲ್ಲಿ ಪಾಕ್
ಈ ವಿಚಾರವಾಗಿ ಮಿಲಿಟರಿ ಉಲ್ಬಣವು ಪ್ರಾದೇಶಿಕ ಸ್ಥಿರತೆಗೆ ಗಂಭೀರ ಬೆದರಿಕೆಯನ್ನು ಒಡ್ಡುತ್ತದೆ. ಎರಡೂ ಕಡೆಯ ನಾಗರಿಕರ ಸುರಕ್ಷತೆಯ ಬಗ್ಗೆ ನಾವು ತೀವ್ರ ಕಳವಳ ಹೊಂದಿದ್ದೇವೆ. ನಾವು ತಕ್ಷಣವೇ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಕರೆ ನೀಡುತ್ತೇವೆ ಮತ್ತು ಶಾಂತಿಯುತ ಫಲಿತಾಂಶಕ್ಕಾಗಿ ಎರಡೂ ದೇಶಗಳು ನೇರ ಸಂವಾದದಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸುತ್ತೇವೆ ಎಂದು ಹೇಳಿವೆ.
ಮೈಸೂರಿನ ಜಯನಗರದಲ್ಲಿರುವ ಇಸ್ಕಾನ್ ದೇವಾಲಯದ ಪಕ್ಕದಲ್ಲಿದ್ದ ಕಸದ ರಾಶಿಯನ್ನು ಮೈಸೂರು ಮಹಾನಗರಪಾಲಿಕೆಯಿಂದ ಮಂಗಳವಾರ ತೆರವುಗೊಳಿಸಲಾಗಿದೆ. ಆಂದೋಲನ ದಿನಪತ್ರಿಕೆಯ ಓದುಗರ ಪತ್ರ…
ಮೈಸೂರಿನ ಪ್ರಮುಖ ವೃತ್ತಗಳಾದ ಸಿದ್ದಪ್ಪ ಸ್ಕ್ವೇರ್, ಸಂಸ್ಕೃತ ಪಾಠಶಾಲೆ, ವಿ.ವಿ.ಪುರಂ, ತಾತಯ್ಯ ವೃತ್ತ ಮೊದಲಾದ ಕಡೆಗಳಲ್ಲಿ ಭಿಕ್ಷುಕರು, ಅಂಗವಿಕಲರು ಪ್ರತಿನಿತ್ಯ…
ಮೈಸೂರಿನ ವೀಣೆ ಶಾಮಣ್ಣ ರಸ್ತೆ ಅವ್ಯವಸ್ಥೆಯ ಆಗರವಾಗಿದೆ. ಒಳಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಪ್ರತಿದಿನವೂ ನಿವಾಸಿಗಳು ಹೊಲಸು ನೀರನ್ನು…
ಹೊಸ ವರ್ಷದ ಆಗಮನವೆಂದರೆ ಬಣ್ಣಬಣ್ಣದ ದೀಪಗಳ ಅಲಂಕಾರ, ಸಿಹಿ ವಿತರಣೆ ಅಥವಾ ಮಧ್ಯರಾತ್ರಿಯ ಸಂಭ್ರಮಾಚರಣೆಯಷ್ಟೇ ಅಲ್ಲ. ಅದು ಕಾಲ ಚಕ್ರದ…
ಪಂಜುಗಂಗೊಳ್ಳಿ ಸಮಾಜದಿಂದ ಪರಿತ್ಯಕ್ತರಾದ ಮಕ್ಕಳ ಬಾಳಲ್ಲಿ ಬೆಳಕು ಮೂಡಿಸಿದ ಆನಂದ ಗ್ರಾಮ ಮಹಾರಾಷ್ಟ್ರದ ಬೀಡ್‌ನ ಜಿಲ್ಲಾ ಆಸ್ಪತ್ರೆಯ ರಕ್ತದ ಬ್ಯಾಂಕಿನಲ್ಲಿ…
ಪುನೀತ್ ಮಡಿಕೇರಿ ಹೊಸ ವರ್ಷಾಚರಣೆಗೆ ಕೊಡಗಿನತ್ತ ಮುಖ ಮಾಡಿದ ಜನರು; ಜಿಲ್ಲೆಯಲ್ಲಿ ಹೆಚ್ಚಿದ ವಾಹನ ದಟ್ಟಣೆ ಮಡಿಕೇರಿ: ಹೊಸ ವರ್ಷವನ್ನು…