ಮುಂಬೈ: ಹೋಟೆಲ್ ಉದ್ಯಮಿ ಜಯಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್‌ಸ್ಟಾರ್ ಛೋಟಾ ರಾಜನ್‌ಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಬಾಂಬಾ ಹೈಕೋರ್ಟ್ ಬುಧವಾರ ಅಮಾನತುಗೊಳಿಸಿದೆ. ಈ ಪ್ರಕರಣದಲ್ಲಿ ಆತನಿಗೆ ಜಾಮೀನು ನೀಡಿದೆ.
ನ್ಯಾಯಮೂರ್ತಿ ರೇವತಿ ಮೋಹಿತೆ ದೇರೆ ಮತ್ತು ಪೃಥ್ವಿರಾಜ್ ಚವಾಣ್ ಅವರಿದ್ದ ದ್ವಿಸದಸ್ಯ ಪೀಠವು ಜಾಮೀನು ನೀಡಿದ್ದು, ಜಾಮೀನಿಗಾಗಿ 1 ಲಕ್ಷ ರೂ ಬಾಂಡ್ ನೀಡುವಂತೆ ಛೋಟಾ ರಾಜನ್‌ಗೆ ಸೂಚಿಸಿದೆ. ಈ ಪ್ರಕರಣದಲ್ಲಿ ಆತನಿಗೆ ಜಾಮೀನು ಸಿಕ್ಕರು ಇತರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಹಿನ್ನೆಲೆ ಜೈಲಿನಲ್ಲೇ ಉಳಿಯುವುದು ಅನಿವಾರ್ಯ ಎಂದು ತೀರ್ಪು ಪ್ರಕಟಿಸಿದೆ.
2011 ರಲ್ಲಿ ಪತ್ರಕರ್ತ ಜೆಡೇ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಛೋಟಾ ರಾಜನ್‌ನನ್ನು ದೆಹಲಿಯ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ. ಆತ ಮಹಾರಾಷ್ಟ್ರದ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಹಲವಾರು ಆರೋಪಗಳನ್ನು ಎದುರಿಸುತ್ತಿದ್ದಾನೆ. ಬಂಧನದಿಂದ ತಪ್ಪಿಸಿಕೊಳ್ಳುವ ಕುಖ್ಯಾತಿ ಪಡೆದಿದ್ದ ಛೋಟಾ ರಾಜನ್ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಬಳಿಕ 2015ರಲ್ಲಿ ಇಂಡೋನೇಷ್ಯಾದ ಬಾಲಿಯಲ್ಲಿ ಆತನನ್ನು ಬಂಧಿಸಲಾಯಿತು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…