ದೇಶ- ವಿದೇಶ

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಅಲ್ಲದೇ, ಸುಮಾರು 60ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, ಈ ಪೈಕಿ 40 ಮಂದಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಿರುವಳ್ಳೂರಿನ ಪೆರಿಯಪಾಳಯಂ ಬಳಿಯ ಕನ್ನಿಗೈಪೈರ್ ಗ್ರಾಮದಲ್ಲಿ ಖಾಸಗಿ ಸೀಗಡಿ ರಫ್ತು ಕಾರ್ಖಾನೆ ಕಾರ್ಯನಿರ್ವಹಿಸುತ್ತಿದೆ. ಇಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಇದ್ದಕ್ಕಿದ್ದಂತೆ ಅಮೋನಿಯಾ ಅನಿಲ ಸೋರಿಕೆಯಾಗಿದೆ. ಕೆಲವೇ ನಿಮಿಷಗಳಲ್ಲಿ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಒಬ್ಬರ ಮೇಲೊಬ್ಬರಂತೆ ಕುಸಿದು ಬಿದ್ದಿದ್ದಾರೆ ಎಂದು ವರದಿಯಾಗಿದೆ.

ಸಾರ್ವಜನಿಕರ ಸಹಾಯದಿಂದ ಅಸ್ವಸ್ಥ ಕಾರ್ಮಿಕರನ್ನು ಕೂಡಲೇ ಇಲ್ಲಿನ ಎರಡು ಸ್ಥಳೀಯ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಚಿಕಿತ್ಸೆ ಪಡೆಯುತ್ತಿದ್ದಾಗಲೇ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

 

 

ಆಂದೋಲನ ಡೆಸ್ಕ್

Recent Posts

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

44 mins ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

4 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

4 hours ago

ಕಸ್ತೂರಿ ರಂಗನ್ ವರದಿ: ದೇವರ ಕಾಡುಗಳಿಗೂ ಆತಂಕ

ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ  ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…

4 hours ago

ರಸ್ತೆ ಡುಬ್ಬ ನಿರ್ಮಿಸಿ; ಅಪಘಾತ ತಪ್ಪಿಸಿ

ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ  ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…

4 hours ago

ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ, ವಾಹನಗಳ ತಂಗುದಾಣ

ಕೆ.ಬಿ.ರಮೇಶನಾಯಕ ಮೈದಾನ ಸಂರಕ್ಷಿಸಿಕೊಳ್ಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ,…

5 hours ago