ಜಾರ್ಜ್‌ಟೌನ್(ಗಯಾನಾ): ಗಯಾನಾದ ಜಾರ್ಜ್‌ಟೌನ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕಾಲ ಪ್ರವಾಸ ಕೈಗೊಂಡಿದ್ದು, ಭಾರತದ ಪ್ರಧಾನಿಯೊಬ್ಬರು 56 ವರ್ಷಗಳ ನಂತರ ಭೇಟಿ ನೀಡಿದಂತಾಗಿದೆ.
ಜಾರ್ಜ್‌ಟೌನ್‌ಗೆ ಇಂದು ಭೇಟಿ ನೀಡಿರುವ ನರೇಂದ್ರ ಮೋದಿ ಅವರನ್ನು ಗಯಾನಾ ಅಧ್ಯಕ್ಷ ಮೊಹಮದ್ ಇರ್ಫಾನ್ ಅಲಿ ಅವರು ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಮೋದಿ ಅವರು ಬ್ರೆಜಿಲ್‌ನಲ್ಲಿ ಎರಡು ದಿನಗಳ ಕಾಲ ನಡೆದ ಜಿ20 ಶೃಂಗ ಸಭೆಯಲ್ಲಿ ಭಾಗವಹಿಸಿದ್ದರು. ಇದೀಗ ಜಾರ್ಜ್‌ಟೌನ್‌ಗೆ ಭೇಟಿ ನೀಡಿದ್ದು, ಭಾರತ-ಕೆರಿಕಮ್ (ಕೆರಿಬಿಯನ್ ಕಮ್ಯುನಿಟಿ) ಶೃಂಗಸಭೆಯಲ್ಲಿ ಮೊಹಮ್ಮದ್ ಇರ್ಫಾನ್ ಅಲಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಬಳಿಕ ಗಯಾನಾ ಸಂಸತ್ತಿನಲ್ಲಿ ವಿಶೇಷ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಉಭಯ ದೇಶಗಳೊಂದಿಗೆ ಸ್ನೇಹದಿಂದ ವ್ಯಾಪಾರ ವಹಿವಾಟು ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತದೊಂದಿಗೆ ಉತ್ತಮ ಸಂಬಂಧ ಮುಂದುವರಿಸಲಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…