ನವದೆಹಲಿ: ಕುಡಿಯುವ ನೀರಿಗಾಗಿ ಜನ ಎನ್‌ಡಿಎಗೆ ಮತ ನೀಡಿದ್ದಾರೆ. ಹಾಗಾಗಿ ಬೆಂಗಳೂರಿಗೆ ಕುಡಿಯುವ ನೀರು ಕೊಡಿ ಎಂದು ಎಚ್.ಡಿ.ದೇವೇಗೌಡ ರಾಜ್ಯಸಭೆಯಲ್ಲಿ ಮನವಿ ಮಾಡಿದ್ದಾರೆ.
ಈ ಬಗ್ಗೆ ರಾಜ್ಯಸಭೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು, ಹಳೇ ಮೈಸೂರು ಭಾಗ ಮತ್ತು ಬೆಂಗಳೂರಿಗೆ ಕಾವೇರಿ ನೀರೇ ಆಧಾರ. ಕುಡಿಯುವ ನೀರು ಕೊಡುವ ಭರವಸೆಯ ಮೇಲೆ ಜನರು ಎನ್‌ಡಿಎಗೆ ಮತ ಹಾಕಿದ್ದಾರೆ. ಆದ್ದರಿಂದ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ ಎಂದು ಮನವಿ ಮಾಡಿದ್ದಾರೆ.
ಬೆಂಗಳೂರು ದಿನದಿಂದ ದಿನಕ್ಕೆ ಬೆಳೆಯುತ್ತಿರುವ ನಗರ. ಬೆಂಗಳೂರಿಗೆ ಕುಡಿಯುವ ನೀರಿನ ಅಗತ್ಯವಿದೆ. ಕುಡಿಯಲು ನೀರಿಲ್ಲದೇ ಜನರು ಕಂಗಾಲಾಗಿದ್ದಾರೆ. ಈ ಬಾರಿ ಮಳೆ ಚೆನ್ನಾಗಿ ಆಗಿರುವ ಪರಿಣಾಮ ಜಲಾಶಯಗಳು ತುಂಬಿ ತುಳುಕುತ್ತಿವೆ. ಆದ್ದರಿಂದ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಬಗೆಹರಿಸಿ ಎಂದು ಮನವಿ ಮಾಡಿದರು.
ಬಳಿಕ ಬಜೆಟ್ ಬಗ್ಗೆ ಮಾತನಾಡಿದ ಅವರು, ನಾನು ಹೃದಯಪೂರ್ವಕವಾಗಿ ಬಜೆಟ್ ಬೆಂಬಲಿಸುತ್ತೇನೆ. ನಾನು ಈ ಹಿಂದೆ ಮೋದಿಯವರನ್ನು ವಿರೋಧಿಸಿದ್ದೆ. ಆದರೆ ಈಗ ನಾನು ಎನ್‌ಡಿಎ ಭಾಗವಾಗಿದ್ದೇನೆ ಎಂದು ಜೆ.ಪಿ.ನಡ್ಡಾಗೆ ಧನ್ಯವಾದ ತಿಳಿಸಿದರು.
ಬಳಿಕ ಕೃಷಿ ಬಗ್ಗೆ ಮಾತನಾಡುತ್ತಾ ಪ್ರಧಾನಿ ನರೇಂದ್ರ ಮೋದಿಯನ್ನು ಹಾಡಿ ಹೊಗಳಿದರು. ಮೋದಿ ಗುಜರಾತ್‌ನಲ್ಲಿ ತಂದ ಸುಧಾರಣೆಗಳ ಬಗ್ಗೆ ವಿವರಿಸಿ ಶ್ಲಾಘಿಸಿದರು.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…