ದೇಶ- ವಿದೇಶ

ಬಂಗಾಳದಲ್ಲಿ ಬಿಜೆಪಿಗೆ ಒಂದು ಅವಕಾಶ ಕೊಡಿ: ಅಮಿತ್‌ ಶಾ ಮನವಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸಲು ಬಿಜೆಪಿಗೆ ಒಂದು ಅವಕಾಶ ಕೊಡಿ. ಭಯ, ಭ್ರಷ್ಟಾಚಾರ ಹಾಗೂ ದುರಾಡಳಿತವನ್ನು ಉತ್ತಮ ಆಡಳಿತದೊಂದಿಗೆ ಬದಲಾವಣೆ ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮನವಿ ಮಾಡಿದ್ದಾರೆ.

ಕೋಲ್ಕತ್ತಾದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅಮಿತ್‌ ಶಾ ಅವರು, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣಾ ಲಾಭಕ್ಕಾಗಿ ಬಾಂಗ್ಲಾದೇಶಿಗಳ ಒಳನುಸುಳುವಿಕೆಯನ್ನು ಪ್ರೋತ್ಸಾಹಿಸುತ್ತಿದ್ದಾರೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ನುಸುಳುಕೋರರನ್ನು ಗುರುತಿಸುವುದಷ್ಟೇ ಅಲ್ಲದೇ, ಅವರನ್ನು ಓಡಿಸುವ ಕೆಲಸ ಮಾಡುತ್ತದೆ ಎಂದು ಭರವಸೆ ನೀಡಿದರು.

ಬಂಗಾಳದ ಜನರು ಒಳನುಸುಳುವಿಕೆಯಿಂದ ಆತಂಕಗೊಂಡಿದ್ದಾರೆ. ನಾವು ಒಳನುಸುಳುವವರನ್ನು ಗುರುತಿಸುವುದಲ್ಲದೇ ಅವರನ್ನು ಓಡಿಸುತ್ತೇವೆ. ಮಮತಾ ಬ್ಯಾನರ್ಜಿ ಚುನಾವಣಾ ಲಾಭಕ್ಕಾಗಿ ಬಾಂಗ್ಲಾದೇಶಿಗಳ ಒಳನುಸುಳುವಿಕೆಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಪಶ್ಚಿಮ ಬಂಗಾಳ ಸರ್ಕಾರ ನಮಗೆ ಭೂಮಿ ನೀಡದ ಕಾರಣ ನಾವು ಬಾಂಗ್ಲಾದೇಶ ಗಡಿಯ ಬೇಲಿಯನ್ನು ಪೂರ್ಣಗೊಳಿಸಲು ಸಾಧ್ಯವಾಗಿಲ್ಲ ಎಂದು ಆರೋಪಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

14 mins ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

4 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

4 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

4 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

7 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

7 hours ago