Mysore
28
overcast clouds

Social Media

ಮಂಗಳವಾರ, 21 ಜನವರಿ 2025
Light
Dark

ದೇವನೂರ ಮಹಾದೇವರಿಗೆ ವೈಕಂ ಪ್ರಶಸ್ತಿ ಪ್ರದಾನ

ವೈಕಂ(ಕೇರಳ): ವೈಕಂ ಹೋರಾಟದ ನೆನಪಿಗೆ ತಮಿಳುನಾಡು ಸರ್ಕಾರ ಕೊಡಮಾಡುವ 2024ನೇ ಸಾಲಿನ ʻವೈಕಂ ಪ್ರಶಸ್ತಿʼಯನ್ನು ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಸ್ವೀಕರಿಸಿದ್ದಾರೆ.

ಕೇರಳದ ವೈಕಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇವನೂರ ಮಹಾದೇವರಿಗೆ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್‌ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

ಕೇರಳದ ವೈಕಂನಲ್ಲಿ ನಡೆದಿದ್ದ ವೈಕಂ ಹೋರಾಟಕ್ಕೆ ಇದೀಗ ನೂರು ವರ್ಷ. ಹೋರಾಟದಲ್ಲಿ ಪೆರಿಯಾರ್‌ ರಾಮಸ್ವಾಮಿ ಅವರು ಭಾಗಿಯಾಗಿದ್ದರು. ಈ ಹಿನ್ನೆಲೆ ಶತಮಾನ ಸಮಾರಂಭ ಮತ್ತು ಪೆರಿಯಾರ್‌ ಸ್ಮಾರಕ ಉದ್ಘಾಟನಾ ಕಾರ್ಯಕ್ರವನ್ನು ಕೇರಳದ ವೈಕಂದಲ್ಲಿ ತಮಿಳುನಾಡು ಸರ್ಕಾರದಿಂದ ಗುರುವಾರ ಹಮ್ಮಿಕೊಳ್ಳಲಾಗಿತ್ತು. ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್‌, ಕೇರಳ ಸಿಎಂ ಪಿಣರಾಯ್‌ ವಿಜಯನ್‌ ಪಾಲ್ಗೊಂಡಿದ್ದರು. ಇದೇ ವೇದಿಕೆ ಕಾರ್ಯಕ್ರಮದಲ್ಲಿ ದೇವನೂರ ಮಹದೇವ ಅವರಿಗೆ ವೈಕಂ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪ್ರಶಸ್ತಿ ಸ್ವೀಕರಿಸಿದ ದೇವನೂರ ಮಹಾದೇವ ತಾವು ಬರೆದಿರುವ ʻಆರ್‌ಎಸ್‌ಎಸ್‌ ಆಳ ಅಗಲʼ ಪುಸ್ತಕದ ಕನ್ನಡ, ಇಂಗ್ಲಿಷ್‌ ಮತ್ತು ಮಲೆಯಾಳಂ ಅವತರಣಿಯನ್ನು ಕೇರಳ ಸಿಎಂ ವಿಜಯನ್‌ ಮತ್ತು ಕನ್ನಡ, ಇಂಗ್ಲಿಷ್‌, ತಮಿಳು ಅವತರಣಿಯನ್ನು ತಮಿಳುನಾಡು ಸಿಎಂ ಸ್ಟಾಲಿನ್‌ ಅವರಿಗೂ ನೀಡಿದರು.

ವೈಕಂ ಪ್ರಶಸ್ತಿಯು 5 ಲಕ್ಷ ರೂ.ನಗದು ಮತ್ತು ಸ್ವರ್ಣಲೇಪಿತ ಪದಕವನ್ನು ಒಳಗೊಂಡಿದೆ. ಸಮಾಜದಲ್ಲಿ ತುಳಿತಕ್ಕೊಳಗಾದ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ ಗಣ್ಯ ವ್ಯಕ್ತಿಗಳು ಅಥವಾ ಸಂಸ್ಥೆಗಳಿಗೆ ವೈಕಂ ಪ್ರಶಸ್ತಿ ನೀಡಲಾಗುತ್ತದೆ ಎಂದು ತಮಿಳುನಾಡು ಸರ್ಕಾರ ತಿಳಿಸಿದೆ.

 

Tags: