ನವದೆಹಲಿ: ಕೇಂದ್ರ ಚುನಾವಣಾ ನೂತನ ಮುಖ್ಯ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿ ಇಂದು ಸಂಜೆ ಸಭೆ ಸೇರಿ ಮುಂದಿನ ಮುಖ್ಯ ಚುನಾವಣಾ ಆಯುಕ್ತರ ಹೆಸರನ್ನು ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿತ್ತು.
ಈ ಹಿನ್ನೆಲೆಯಲ್ಲಿ ಈಗ 26ನೇ ಕೇಂದ್ರ ಚುನಾವಣಾ ಮುಖ್ಯ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ.
ಜ್ಞಾನೇಶ್ ಕುಮಾರ್ ಅವರು ಕೇರಳ ಕೇಡರ್ ಐಎಎಸ್ ಅಧಿಕಾರಿಯಾಗಿದ್ದು, ರಾಜೀವ್ ಕುಮಾರ್ ನಿವೃತ್ತಿ ಬಳಿಕ ಜ್ಞಾನೇಶ್ ಕುಮಾರ್ ಅವರನ್ನು ನೂತನ ಚುನಾವಣಾ ಆಯುಕ್ತರಾಗಿ ಆಯ್ಕೆ ಮಾಡಲಾಗಿದೆ.





