ದೇಶ- ವಿದೇಶ

ಗೋವಾ ಸಚಿವ ಹಾಗೂ ಮಾಜಿ ಸಿಎಂ ರವಿ ನಾಯ್ಕ್‌ ನಿಧನ

ಪಣಜಿ: ಹೃದಯಸ್ತಂಭನದಿಂದ ಗೋವಾ ಮಾಜಿ ಸಿಎಂ, ಕೃಷಿ ಸಚಿವ ರವಿ ನಾಯ್ಕ್‌ ಮಂಗಳವಾರ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.

ಪಣಜಿಯಿಂದ 30 ಕಿ.ಮೀ ದೂರದಲ್ಲಿರುವ ನಿವಾಸದಲ್ಲಿ ರವಿ ನಾಯ್ಕ್‌ ಅವರು ಹೃದಯಸ್ತಂಭನಕ್ಕೊಳಗಾಗಿದ್ದರು. ಕೂಡಲೇ ಅವರನ್ನು ಪೊಂಡಾ ಪಟ್ಟಣದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತಡರಾತ್ರಿ 1 ಗಂಟೆಯ ಸುಮಾರಿಗೆ ರವಿ ನಾಯ್ಕ್‌ ನಿಧನರಾಗಿದ್ದಾರೆ. ಇಂದು ಸಂಜೆ 5 ಗಂಟೆಯ ಸುಮಾರಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಇದನ್ನು ಓದಿ: ರಂಗ ಕಲಾವಿದ, ಹಾಸ್ಯನಟ ರಾಜು ತಾಳಿಕೋಟೆ ನಿಧನ

79 ವರ್ಷದ ರವಿ ನಾಯ್ಕ್‌ 2 ಬಾರಿ ಸಿಎಂ ಆಗಿ ಆಯ್ಕೆಯಾಗಿದ್ದರು. ಅಲ್ಲದೇ 7 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಇನ್ನು ರವಿ ನಾಯ್ಕ್‌ ನಿಧನಕ್ಕೆ ಗೋವಾ ಸಿಎಂ ಪ್ರಮೋದ್‌ ಸಾವಂತ್‌ ಸಂತಾಪ ಸೂಚಿಸಿದ್ದಾರೆ.

ರವಿ ನಾಯ್ಕ್‌ ಅವರ ನಾಯಕತ್ವ, ವಿನಯತೆ ಹಾಗೂ ಸಾರ್ವಜನಿಕ ಕಲ್ಯಾಣಕ್ಕೆ ನೀಡಿದ ಕೊಡುಗೆ ಗಮನಾರ್ಹ ಎಂದು ಪ್ರಮೋದ್‌ ಸಾವಂತ್‌ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ದೀನದಲಿತರ ಸಬಲೀಕರಣದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದ ರವಿ ನಾಯ್ಕ್‌, ಗೋವಾದ ಅಭಿವೃದ್ಧಿ ಪಥವನ್ನು ಹೆಚ್ಚು ಶ್ರೀಮಂತಗೊಳಿಸಿದ್ದ ಅನುಭವಿ ಆಡಳಿತಗಾರ. ಅಲ್ಲದೇ ಸಾರ್ವಜನಿಕ ಸೇವೆಗಾಗಿ ತನ್ನನ್ನು ತಾನು ಸಮರ್ಪಿಸಿಕೊಂಡಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಉಲ್ಲೇಖಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಭಾರತ-ರಷ್ಯಾ ನಡುವೆ ಹಲವು ಒಪ್ಪಂದಗಳಿಗೆ ಸಹಿ

ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…

18 mins ago

ವಾಚ್‌ ವಿಚಾರವಾಗಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…

23 mins ago

ನನಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ: ಸಚಿವ ದಿನೇಶ್‌ ಗುಂಡೂರಾವ್‌

ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.…

1 hour ago

ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯವಿಲ್ಲ

ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…

1 hour ago

ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ, ಶ್ರೀ ನಂಜುಂಡಸ್ವಾಮಿಗಳ 16ನೇ ಸಂಸ್ಮರಣೋತ್ಸವ

ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…

1 hour ago

ರೆಪೋ ದರ ಕಡಿತಗೊಳಿಸಿದ ಭಾರತೀಯ ರಿಸರ್ವ್ ಬ್ಯಾಂಕ್

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು…

2 hours ago