Mysore
21
overcast clouds
Light
Dark

ಗೋವಾ: ರಸ್ತೆ ಬದಿಯ ಗುಡಿಸಲಿಗೆ ಖಾಸಗಿ ಬಸ್‌ ಡಿಕ್ಕಿ; ನಾಲ್ವರು ಕಾರ್ಮಿಕರ ಸಾವು

ಪಣಜಿ: ಖಾಸಗಿ ಬಸ್ಸೊಂದು ರಸ್ತೆ ಬದಿಯ ಎರಡು ಗುಡಿಸಲುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಗೋವಾ ಜಿಲ್ಲೆಯ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಶನಿವಾರ(ಮೇ.೨೫) ರಾತ್ರಿ ಸಂಭವಿಸಿದೆ.

ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಕಾರ್ಮಿಕರು, ಕೆಲಸ ಮುಗಿಸಿ ರಸ್ತೆ ಬದಿಯ ತಮ್ಮ ಗುಡಿಸಲುಗಳಲ್ಲಿ ಮಲಗಿದ್ದರು. ಈ ವೇಳೆ ಖಾಸಗಿ ಬಸ್‌ ಗುಡಿಸಲುಗಳಿಗೆ ಡಿಕ್ಕಿ ಹೊಡೆದಿದೆ ಎಂದು  ಪೋಲಿಸರು ತಿಳಿಸಿದ್ದಾರೆ.

ಘಟನೆಯ ವಿವರ
ಪಣಜಿ ಸಮೀಪದ ಖಾಸಗಿ ಕಂಪನಿಯೊಂದರ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಬಸ್ ಏಕಾಏಕಿ ಕಾರ್ಮಿಕರು ಮಲಗಿದ್ದ ಎರಡು ಗುಡಿಸಲುಗಳಿಗೆ ಡಿಕ್ಕಿ ಹೊಡೆದೆ ಪರಿಣಾಮ ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಐವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪ್ರಕರಣ ಸಂಬಂದ ಖಾಸಗಿ ಬಸ್ ಚಾಲಕನನ್ನು ಬಂಧಿಸಲಾಗಿದೆ. ಘಟನೆಯ ವೇಳೆ ಬಸ್ ಚಾಲಕ ಮದ್ಯದ ಅಮಲಿನಲ್ಲಿದ್ದ. ಈ ಬಗ್ಗೆ ಯಾರಿಗಾದರೂ ದೂರು ನೀಡಿದರೆ ಕೊಲ್ಲುವುದಾಗಿ ಇತರ ಕಾರ್ಮಿಕರಿಗೆ ಬೆದರಿಕೆ ಹಾಕಿದ್ದಾನೆ ಎಂದು ಕಾರ್ಮಿಕರು ತಿಳಿಸಿದ್ದಾರೆ.  ಗಾಯಗೊಂಡಿರುವ ಕಾರ್ಮಿಕರನ್ನು ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.