ಪಣಜಿ: ಖಾಸಗಿ ಬಸ್ಸೊಂದು ರಸ್ತೆ ಬದಿಯ ಎರಡು ಗುಡಿಸಲುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಗೋವಾ ಜಿಲ್ಲೆಯ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಶನಿವಾರ(ಮೇ.೨೫) ರಾತ್ರಿ ಸಂಭವಿಸಿದೆ.
ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಕಾರ್ಮಿಕರು, ಕೆಲಸ ಮುಗಿಸಿ ರಸ್ತೆ ಬದಿಯ ತಮ್ಮ ಗುಡಿಸಲುಗಳಲ್ಲಿ ಮಲಗಿದ್ದರು. ಈ ವೇಳೆ ಖಾಸಗಿ ಬಸ್ ಗುಡಿಸಲುಗಳಿಗೆ ಡಿಕ್ಕಿ ಹೊಡೆದಿದೆ ಎಂದು ಪೋಲಿಸರು ತಿಳಿಸಿದ್ದಾರೆ.
ಘಟನೆಯ ವಿವರ
ಪಣಜಿ ಸಮೀಪದ ಖಾಸಗಿ ಕಂಪನಿಯೊಂದರ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಬಸ್ ಏಕಾಏಕಿ ಕಾರ್ಮಿಕರು ಮಲಗಿದ್ದ ಎರಡು ಗುಡಿಸಲುಗಳಿಗೆ ಡಿಕ್ಕಿ ಹೊಡೆದೆ ಪರಿಣಾಮ ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಐವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪ್ರಕರಣ ಸಂಬಂದ ಖಾಸಗಿ ಬಸ್ ಚಾಲಕನನ್ನು ಬಂಧಿಸಲಾಗಿದೆ. ಘಟನೆಯ ವೇಳೆ ಬಸ್ ಚಾಲಕ ಮದ್ಯದ ಅಮಲಿನಲ್ಲಿದ್ದ. ಈ ಬಗ್ಗೆ ಯಾರಿಗಾದರೂ ದೂರು ನೀಡಿದರೆ ಕೊಲ್ಲುವುದಾಗಿ ಇತರ ಕಾರ್ಮಿಕರಿಗೆ ಬೆದರಿಕೆ ಹಾಕಿದ್ದಾನೆ ಎಂದು ಕಾರ್ಮಿಕರು ತಿಳಿಸಿದ್ದಾರೆ. ಗಾಯಗೊಂಡಿರುವ ಕಾರ್ಮಿಕರನ್ನು ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.
ನವದೆಹಲಿ: ರಾಷ್ಟ್ರ ರಾಜಧಾನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸತತ ಎರಡನೇ ದಿನವೂ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ…
ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್ ತಿಂಗಳಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ…
ಕಠ್ಮಂಡು: ನೇಪಾಳಕ್ಕೆ ಮತ್ತೆ ವಿನಾಶಕಾರಿ ಪ್ರವಾಹದ ಆತಂಕ ಎದುರಾಗಿದೆ. ದಾರ್ಚುಲಾ ಜಿಲ್ಲೆಯ ಅಪಿ ಹಿಮಾಲ್ ಗ್ರಾಮೀಣ ಪುರಸಭೆಯ ಭಟ್ಟಾರ್ ಪ್ರದೇಶದಲ್ಲಿ…
ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಮತ್ತು ರಾಜ್ಯ ಜಲಸಂಪನ್ಮೂಲ ಸಚಿವ ಎನ್.ಚಲುವರಾಯ ಸ್ವಾಮಿಯವರ ನಡುವಿನ ಆರೋಪ ಮತ್ತು ಪ್ರತ್ಯಾರೋಪಗಳು…
ಸರ್ಕಾರವು ೭೦ ವರ್ಷದೊಳಗಿನ ನಿವೃತ್ತ ಸರ್ಕಾರಿ ಪಿಂಚಣಿದಾರರಿಗೆ, ಕುಟುಂಬ ಪಿಂಚಣಿದಾರರಿಗೆ ಮತ್ತು ಅವರ ಅರ್ಹ ಅವಲಂಬಿತ ವಿಕಲಚೇತನ ಮಕ್ಕಳ ಆರೋಗ್ಯ…
ನಮ್ಮಲ್ಲಿ ಗುರುವಿಗೆ ಅಗ್ರಸ್ಥಾನ ಕೊಟ್ಟಿದ್ದೇವೆ. ಒಂದು ಅಕ್ಷರ ಕಲಿಸಿದವರನ್ನು ಗುರುವೆಂದು ಒಪ್ಪಿಕೊಂಡಿದ್ದೇವೆ. ಗುರುವು ನಮಗೆ ಒಳ್ಳೆಯ ಮಾರ್ಗ,ನಡತೆ ಹಾಗೂ ಜ್ಞಾನವನ್ನು…