ದೇಶ- ವಿದೇಶ

ಗೋವಾ ಅವಘಡ : ಭಾರತದಿಂದ ಪರಾರಿಯಾದ ಲುತ್ರಾ ಸೋದರರು ಥಾಯ್ಲೆಂಡ್‌ನಲ್ಲಿ ವಶಕ್ಕೆ

ಪಣಜಿ : ಗೋವಾ ಬೆಂಕಿ ಅವಘಡ ಪ್ರಕರಣದಲ್ಲಿ ಭಾರತದಿಂದ ಪರಾರಿಯಾಗಿದ್ದ ನೈಟ್ ಕ್ಲಬ್ ಮಾಲೀಕರಾದ ಸೌರಭ್ ಲುತ್ರಾ ಮತ್ತು ಗೌರವ್ ಲುತ್ರಾ ಅವರನ್ನು ಥಾಯ್ಲೆಂಡ್ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಡಿಸೆಂಬರ್ ೬ರ ತಡರಾತ್ರಿ ಗೋವಾ ನೈಟ್ ಕ್ಲಬ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದ ಬೆನ್ನಲ್ಲೇ ಲುತ್ರಾ ಸೋದರರು ಥಾಯ್ಲೆಂಡ್‌ಗೆ ಪರಾರಿಯಾಗಿದ್ದರು. ಸೌರಭ್ ಲುತ್ರಾ ಮತ್ತು ಗೌರವ್ ಲುತ್ರಾ ವಶಕ್ಕೆ ಪಡೆಯಲು ಇಂಟರ್ಪೋಲ್, ಬ್ಲ್ಯೂ ಕಾರ್ನರ್ ನೋಟಿಸ್ ಜಾರಿ ಮಾಡಿತ್ತು. ಭಾರತ ಸರ್ಕಾರದ ಕೋರಿಕೆಯ ಮೇರೆಗೆ ಲುತ್ರಾ ಸಹೋದರರನ್ನು ಥಾಯ್ಲೆಂಡ್ನ ಫುಕೆಟ್‌ನಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:-ಡೀಮ್ಡ್‌ ಅರಣ್ಯ ಪ್ರದೇಶ ಗುರುತಿಸುವಿಕೆಗೆ ಸಮಿತಿ ರಚನೆ : ಈಶ್ವರ ಖಂಡ್ರೆ

ಆರೋಪಿಗಳನ್ನು ಆದಷ್ಟು ಬೇಗನೇ ಭಾರತಕ್ಕೆ ಕರೆತರಲು ಪ್ರಯತ್ನ ನಡೆಯುತ್ತಿದೆ. ಉತ್ತರ ಗೋವಾದ ‘ಬರ್ಚ್ ಬೈ ರೋಮಿಯೊ ಲೇನ್’ ನೈಟ್ ಕ್ಲಬ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ೨೫ ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು. ಪೊಲೀಸರು ಹಾಗೂ ಅಗ್ನಿಶಾಮಕ ದಳ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದ್ದಾಗ ನೈಟ್ ಕ್ಲಬ್‌ನ ಮಾಲೀಕರು ಭಾನುವಾರ (ಡಿ.೭) ಮುಂಜಾನೆ ಇಂಡಿಗೊ ವಿಮಾನದ ಮೂಲಕ ಥಾಯ್ಲೆಂಡ್‌ಗೆ ಪರಾರಿಯಾಗಿದ್ದರು. ಬಳಿಕ ಲುತ್ರಾ ಸೋದರರ ವಿರುದ್ದ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡುವಂತೆ ಸಿಬಿಐಗೆ ಗೋವಾ ಪೊಲೀಸರು ಮನವಿ ಸಲ್ಲಿಸಿದ್ದರು.

ಆಂದೋಲನ ಡೆಸ್ಕ್

Recent Posts

ಚಾ.ನಗರ | ಬೇಡರಪುರದಲ್ಲಿ ಮತ್ತೊಂದು ಚಿರತೆ ಸೆರೆ

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…

9 hours ago

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

10 hours ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

10 hours ago

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…

10 hours ago

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

11 hours ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

11 hours ago