ಗೋವಾ: ಇಲ್ಲಿನ ನೈಟ್ ಕ್ಲಬ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್ ಕ್ಲಬ್‌ನಲ್ಲಿ ಘಟನೆ ನಡೆದಿದೆ.
ಮಧ್ಯರಾತ್ರಿ 12 ಗಂಟೆ ಸುಮಾರಿಗೆ ನೈಟ್ ಕ್ಲಬ್‌ನಲ್ಲಿ ಬೆಂಕಿ ಹೊತ್ತಿಕೊಂಡು 25 ಜನ ಸಜೀವ ದಹನವಾಗಿದ್ದಾರೆ. ಕ್ಲಬ್‌ನ ಅಡುಗೆ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಬೆಂಕಿ ಹರಡಿದ್ದು, ಕ್ಲಬ್ ಸಿಬ್ಬಂದಿ, ಪ್ರವಾಸಿಗರು ಸಾವನ್ನಪ್ಪಿದ್ದಾರೆ.
ಮೃತರಲ್ಲಿ ಹೆಚ್ಚಿನವರು ಕ್ಲಬ್ ಸಿಬ್ಬಂದಿ, ಪ್ರವಾಸಿಗರು ಎಂದು ಪೊಲೀಸರು ಹೇಳಿದ್ದಾರೆ. ಹೆಚ್ಚಿನ ಶವಗಳು ನೆಲ ಮಹಡಿಯಲ್ಲಿರುವ ಅಡುಗೆಮನೆ ಪ್ರದೇಶದಿಂದ ಪತ್ತೆಯಾಗಿವೆ. ಸಿಲಿಂಡರ್ ಸ್ಫೋಟದಿಂದ ಬೆಂಕಿ ಸಂಭವಿಸಿದೆ ಎಂದು ಗೋವಾ ಡಿಜಿಪಿ ಅಲೋಕ್ ಕುಮಾರ್ ದೃಢಪಡಿಸಿದ್ದಾರೆ.





