ಪುಣೆ : ತಲೆಮರೆಸಿಕೊಂಡಿದ್ದ ಗೋಧ್ರಾ ರೈಲು ಹತ್ಯಾಕಾಂಡದ ಅಪರಾಧಿಯನ್ನು ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಲೀಂ ಜರ್ದಾ ಬಂಧಿತ ಅಪರಾಧಿ. ಈತ ಗೋಧ್ರಾ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ. ಈತ 2024 ರ ಸೆಪ್ಟಂಬರ್ 7 ರಂದು ಏಳು ದಿನ ಪರೋಲ್‌ನಲ್ಲಿ ಹೊರಗೆ ಬಂದಿದ್ದ. ಈ ವೇಳೆ ಆರೋಪಿ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಪರೋಲ್ ಅವಧಿ ಮುಗಿದರು ಜೈಲಿಗೆ ವಾಪಸ್ಸಾಗದೆ ತಲೆ ಮರೆಸಿಕೊಂಡಿದ್ದ ಈತ ಪುಣೆಯ ಗ್ರಾಮೀಣ ಪ್ರದೇಶದಲ್ಲಿ ಕಳ್ಳತನ ನಡೆಸುತ್ತಿದ್ದ. ಈ ವೇಳೆ ಆರೋಪಿ ಮತ್ತು ಸಹಚರರನ್ನು ಜ.22ರಂದು ಬಂಧಿಸಲಾಗಿದ್ದು. ತನಿಖೆ ವೇಳೆ ಈತ ಗೋಧ್ರಾ ರೈಲು ಹತ್ಯಾಕಾಂಡ ಪ್ರಕರಣದ ಆರೋಪಿ ಎನ್ನುವುದು ಗೊತ್ತಾಯಿತು. ಈತ ತನ್ನ ಗ್ಯಾಂಗ್‌ನೊಂದಿಗೆ ಗುಜರಾತ್‌ನ ಗೋಧ್ರಾದಿಂದ ಪುಣೆ ಜಿಲ್ಲೆಗೆ ಬಂದು ಕಳ್ಳತನ ನಡೆಸುತ್ತಿದ್ದ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
2002 ಫೆ.22 ರಂದು ಗೋಧ್ರಾದಲ್ಲಿ ಸಬರಮತಿ ಎಕ್ಸ್‌ಪ್ರೆಸ್ ಎಸ್-6 ಕೋಚ್‌ಗೆ ಬೆಂಕಿ ಹಚ್ಚಿ 59 ಮಂದಿಯನ್ನು ಕೊಂದ ಪ್ರಕರಣದಲ್ಲಿ ಆರೋಪಿ ಜರ್ದ ಮತ್ತು ಸಹಚರರು ದೋಷಿಗಳಾಗಿದ್ದರು.