ನವದೆಹಲಿ: ದೆಹಲಿ ಮದ್ಯ ನೀತಿ ಹಗರಣದಲ್ಲಿ ಮಧ್ಯಂತರ ಜಾಮೀನು ಮೇಲೆ ಹೊರಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಭಾನುವಾರ(ಜೂನ್ ೧) ಜೈಲಿಗೆ ಶರಣಾಗುವುದಾಗಿ ತಿಳಿಸಿದ್ದಾರೆ.
ಜೈಲಿಗೆ ಒಳಗೆ ಅಥವಾ ಹೊರಗೆ ಎಲ್ಲೇ ಇದ್ರು ದೆಹಲಿಯ ಕೆಲಸವನ್ನು ನಿಲ್ಲಿಸಲು ಬಿಡುವುದಿಲ್ಲ. ಎಷ್ಟು ದಿನ ನಾನು ಜೈಲಿನಲ್ಲಿರುತ್ತೇನೆ ಎಂದು ತಿಳಿದಿಲ್ಲ. ಆದರೆ ಸರ್ವಾಧಿಕಾರದ ವಿರುದ್ಧ ಹೋರಾಡಲು ನಾನು ಜೈಲಿಗೆ ಹೋಗುತ್ತಿದ್ದೇನೆ. ಈ ಬಗ್ಗೆ ನನಗೆ ಹೆಮ್ಮೆ ಇದೆ ಎಂದು ಹೇಳಿದ್ದಾರೆ.
ಭಾನುವಾರ ಮನೆಯಿಂದ ಹೊರಡಿ ಜೈಲಿಗೆ ಶರಣಾಗುತ್ತೇನೆ. ನಾವು ದೌರ್ಜನ್ಯದ ವಿರುದ್ಧ ಹೋರಾಡುತ್ತಿದ್ದೇವೆ. ಜೈಲಿನಲ್ಲಿ ನನಗೆ ಕಿರುಕುಳ ನೀಡಲಾಗಿದೆ. ನನಗೆ ಸರಿಯಾದ ಆಹಾರ, ಔಷಧಿ ನೀಡಿಲ್ಲ, ದೇಶಕ್ಕಾಗಿ ನನ್ನ ಪ್ರಾಣವನ್ನು ಬೇಕಾದರೂ ತ್ಯಾಗ ಮಾಡುತ್ತೇನೆ ಎಂದು ಅವರು ವಿವರಿಸಿದರು.
ದೆಹಲಿ ಅಬಕಾರಿ ನೀತಿ ಹಗರಣಕೆಕ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಮಾರ್ಚ್ ತಿಂಗಳಲ್ಲಿ ಬಂಧಿತರಾಗಿದ್ದ ಕೇಜ್ರಿವಾಲ್ ಅವರಿಗೆ ಪ್ರಜಾತಂತ್ರದ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಜೂನ್ ೧ ರವರೆಗೆ ಸುಪ್ರೀಂ ಕೋರ್ಟ್ ಜಾಮೀನಿ ನೀಡಿತ್ತು.





