ದೇಶ- ವಿದೇಶ

ದೇಶ ರಕ್ಷಣೆಗೆ ಜೈಲಿಗೆ ಹೋಗುತ್ತಿದ್ದೇನೆ: ಕೇಜ್ರಿವಾಲ್

ನವದೆಹಲಿ: ದೆಹಲಿ ಮದ್ಯ ನೀತಿ ಹಗರಣದಲ್ಲಿ ಮಧ್ಯಂತರ ಜಾಮೀನು ಮೇಲೆ ಹೊರಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರು ಭಾನುವಾರ(ಜೂನ್ ೧) ಜೈಲಿಗೆ ಶರಣಾಗುವುದಾಗಿ ತಿಳಿಸಿದ್ದಾರೆ.
ಜೈಲಿಗೆ ಒಳಗೆ ಅಥವಾ ಹೊರಗೆ ಎಲ್ಲೇ ಇದ್ರು ದೆಹಲಿಯ ಕೆಲಸವನ್ನು ನಿಲ್ಲಿಸಲು ಬಿಡುವುದಿಲ್ಲ. ಎಷ್ಟು ದಿನ ನಾನು ಜೈಲಿನಲ್ಲಿರುತ್ತೇನೆ ಎಂದು ತಿಳಿದಿಲ್ಲ. ಆದರೆ ಸರ್ವಾಧಿಕಾರದ ವಿರುದ್ಧ ಹೋರಾಡಲು ನಾನು ಜೈಲಿಗೆ ಹೋಗುತ್ತಿದ್ದೇನೆ. ಈ ಬಗ್ಗೆ ನನಗೆ ಹೆಮ್ಮೆ ಇದೆ ಎಂದು  ಹೇಳಿದ್ದಾರೆ.
ಭಾನುವಾರ ಮನೆಯಿಂದ ಹೊರಡಿ ಜೈಲಿಗೆ ಶರಣಾಗುತ್ತೇನೆ. ನಾವು ದೌರ್ಜನ್ಯದ ವಿರುದ್ಧ ಹೋರಾಡುತ್ತಿದ್ದೇವೆ.  ಜೈಲಿನಲ್ಲಿ ನನಗೆ ಕಿರುಕುಳ ನೀಡಲಾಗಿದೆ. ನನಗೆ ಸರಿಯಾದ ಆಹಾರ, ಔಷಧಿ ನೀಡಿಲ್ಲ, ದೇಶಕ್ಕಾಗಿ ನನ್ನ ಪ್ರಾಣವನ್ನು ಬೇಕಾದರೂ ತ್ಯಾಗ ಮಾಡುತ್ತೇನೆ ಎಂದು ಅವರು ವಿವರಿಸಿದರು.
ದೆಹಲಿ ಅಬಕಾರಿ ನೀತಿ ಹಗರಣಕೆಕ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಮಾರ್ಚ್‌ ತಿಂಗಳಲ್ಲಿ ಬಂಧಿತರಾಗಿದ್ದ ಕೇಜ್ರಿವಾಲ್‌ ಅವರಿಗೆ ಪ್ರಜಾತಂತ್ರದ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಜೂನ್‌ ೧ ರವರೆಗೆ ಸುಪ್ರೀಂ ಕೋರ್ಟ್‌ ಜಾಮೀನಿ ನೀಡಿತ್ತು.
ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

4 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

5 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

20 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

23 hours ago