ನವದೆಹಲಿ: ಆಭರಣ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, 10 ಗ್ರಾಂಗೆ ಬರೋಬ್ಬರಿ 1 ಲಕ್ಷ ರೂಪಾಯಿ ದಾಟಿದೆ.
ಜಾಗತಿಕ ಮಾರುಕಟ್ಟೆಯಲ್ಲಿನ ತಲ್ಲಣಗಳಿಂದಾಗಿ ಚಿನ್ನದ ದರ ಹೆಚ್ಚಾಗಿದ್ದು, 24 ಕ್ಯಾರೆಟ್ ಶುದ್ಧ ಚಿನ್ನದ ದರ ಪ್ರತಿ ಗ್ರಾಂಗೆ 10,000 ರೂಪಾಯಿ ಆಗಿದೆ.
ಬೆಂಗಳೂರು, ಮುಂಬೈ, ಕೋಲ್ಕತ್ತಾ, ದೆಹಲಿ, ಚೆನ್ನೈ ಸೇರಿದಂತೆ ಎಲ್ಲಾ ಮಾರುಕಟ್ಟೆಗಳಲ್ಲಿ ಚಿನ್ನದ ದರ ಏರುಗತಿಯಲ್ಲಿದೆ.
ಈ ಹಿನ್ನೆಲೆಯಲ್ಲಿ ಆಭರಣ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಚಿನ್ನದ ಅಂಗಡಿಯ ಕಡೆ ತಿರುಗಿಯೂ ನೋಡದ ಪರಿಸ್ಥಿತಿ ನಿರ್ಮಾಣವಾಗಿದೆ.





