ನವದೆಹಲಿ: ರೈತರಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಹೊಸ ವರ್ಷದಲ್ಲಿ 19 ನೇ ಕಂತಿನ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಹಣ ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಿದೆ.
ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಮೂಲಕ ಪ್ರತಿ ವರ್ಷ ರೈತರಿಗೆ 6000 ರೂಗಳ ಆರ್ಥಿಕ ನೆರವು ನೀಡಲಾಗುವುದು. ಇದನ್ನು ವರ್ಷಕ್ಕೆ ಮೂರು ಕಂತುಗಳಲ್ಲಿ ಪಾವತಿಸಲಾಗುವುದು. ಈ ಹಿನ್ನೆಲೆಯಲ್ಲಿ ಹೊಸ ವರ್ಷದ ಆರಂಭದಲ್ಲೇ 18 ನೇ ಕಂತನ್ನು ಪಡೆಯದ ರೈತರಿಗೆ 19ನೇ ಕಂತಿನ ಜೊತೆಗೆ ಹಣ ಬಿಡುಗಡೆ ಮಾಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಇಕೆವೈಸಿ ಪೂರ್ಣಗೊಳಿಸದ ರೈತರು ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಇ-ಕೆವೈಸಿ ನವೀಕರಿಸಲು ಪಿಎಂ ಕಿಸಾನ್ ಸಮ್ಮಾನ್ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ ಮತ್ತು ಭೂಮಿಯ ವಿವರಗಳನ್ನು ನಮೂದಿಸಿ ಎಂದು ಮಾಹಿತಿ ನೀಡಲಾಗಿದೆ.