Mysore
21
overcast clouds

Social Media

ಸೋಮವಾರ, 07 ಅಕ್ಟೋಬರ್ 2024
Light
Dark

70ವರ್ಷ ಮೇಲ್ಪಟ್ಟವರಿಗೂ ಕೇಂದ್ರದಿಂದ ಗುಡ್‌ನ್ಯೂಸ್‌…

ನವದೆಹಲಿ: 70 ವರ್ಷ ಹಾಗೂ ಅದಕ್ಕಿಂತ ಹೆಚ್ಚು ವಯಸ್ಸಾದ ಹಿರಿಯ ನಾಗರಿಕರಿಗೆ ಆಯುಷ್ಮಾನ್‌ ಭಾರತ್‌ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ 5 ಲಕ್ಷ ರೂ. ಮೌಲ್ಯದ ಆರೋಗ್ಯ ವಿಮೆ ಒದಗಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಈ ನಿರ್ಧಾರ ತೆಗೆದುಕೊಂಡಿದ್ದು, ದೇಶಾದ್ಯಂತ ಇರುವ 4.5ಕೋಟಿ ಕುಟುಂಬಗಳಿಗೆ ಲಾಭವಾಗಲಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನ್‌ ವೈಷ್ಣವ್‌ ಬುಧುವಾರ ತಿಳಿಸಿದ್ದಾರೆ.

ಹಿರಿಯ ನಾಗರಿಕರ ಆದಾಯ ಎಷ್ಟೇ ಇದ್ದರೂ ಅವರು ಈ ಯೋಜನೆಯ ಪ್ರಯೋಜನ ಪಡೆಯಬಹುದು. ಈ ಯೋಜನೆಯಡಿ ಸುಮಾರು 6 ಕೋಟಿ ಹಿರಿಯ ನಾಗರಿಕರು ಅರ್ಹರಾಗುತ್ತಾರೆ. ಅರ್ಹ ಫಲಾನುಭವಿಗಳಿಗೆ ಯೋಜನೆಯ ಅಡಿಯಲ್ಲಿ ಹೊಸದಾಗಿ ಕಾರ್ಡ್‌ ಒಂದನ್ನು ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Tags: