ಮುಂಬೈ: ಸರ್ಕಾರಿ ಬಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣ, ಕರ್ನಾಟಕ ಸರ್ಕಾರ ಸ್ಪಷ್ಟ ನಿಲುವು ತೆಗೆದುಕೊಳ್ಳುವವರೆಗೂ ಕರ್ನಾಟಕಕ್ಕೆ ತೆರಳುವ ಸರ್ಕಾರಿ ಬಸ್ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ್‌ಸರ್‌ನಾಯಕ್ ಹೇಳಿದ್ದಾರೆ.
ನಡೆದಿರುವ ಘಟನೆಗಳ ಬಗ್ಗೆ ಕರ್ನಾಟಕ ಸರ್ಕಾರ ತಮ್ಮ ಜೊತೆಗೆ ಚರ್ಚಿಸುವವರೆಗೂ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಸರ್ಕಾರಿ ಬಸ್ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಈ ನಡುವೆ, ಪುಣೆಯಲ್ಲಿ ಶಿವಸೇನಾ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಕರ್ನಾಟಕದ ನಂಬರ್ ಪ್ಲೇಟ್ ಹೊಂದಿರುವ ಬಸ್‌ಗಳಿಗೆ ಕಪ್ಪು ಮಸಿ ಹಚ್ಚಿದರು.
ಬೆಳಗಾವಿ ತಾಲೂಕಿನ ಬಾಳೇಕುಂದ್ರಿ ಗ್ರಾಮದಲ್ಲಿ ಶುಕ್ರವಾರ ವಾಯವ್ಯ ಸಾರಿಗೆ ಸಂಸ್ಥೆಯ ಬಸ್ ಸಿಬ್ಬಂದಿಗಳ ಮೇಲಿನ ಹಲ್ಲೆ ಪ್ರಕರಣದಿಂದಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಬಸ್‌ಗಳ ಸಂಚಾರ ವ್ಯತ್ಯಯವಾಗಿದೆ.





