Mysore
72
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಐಪಿಎಸ್‌ ವಿಕಾಸ್‌ ಕುಮಾರ್‌ ಅಮಾನತು ರದ್ದು ಪ್ರಶ್ನಿಸಿ ಹೈಕೋರ್ಟ್‌ ಮೊರೆ ಹೋದ ಸರ್ಕಾರ

Vikas Kumar suspension

ಬೆಂಗಳೂರು: ಇಲ್ಲಿನ ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಅಮಾನತು ಆದೇಶ ರದ್ದುಪಡಿಸಿರುವ ಕೇಂದ್ರೀಯ ಆಡಳಿತ ನ್ಯಾಯಾಧೀಕರಣದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿದೆ.

ಅರ್ಜಿಯನ್ನು ಶೀಘ್ರದಲ್ಲಿ ವಿಚಾರಣೆ ನಡೆಸಬೇಕು ಎಂದು ಕೋರಿ ಹೈಕೋರ್ಟ್ ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ಅವರಿದ್ದ ವಿಭಾಗೀಯ ಪೀಠಕ್ಕೆ, ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಮನವಿ ಮಾಡಿದರು. ಈ ಅಂಶವನ್ನು ಪರಿಗಣಿಸಿದ ನ್ಯಾಯಪೀಠ, ನಾಳೆ (ಗುರುವಾರ) ಅರ್ಜಿ ವಿಚಾರಣೆ ನಡೆಸುವುದಾಗಿ ತಿಳಿಸಿತು. ಒಂದು ಹಂತದಲ್ಲಿ ಇಂದೇ ವಿಚಾರಣೆಯಾಗಬೇಕೆಂಬ ತರಾತುರಿ ಯಾಕೆ ಎಂದು ನ್ಯಾಯಮೂರ್ತಿಗಳು ಪ್ರಶ್ನೆ ಮಾಡಿದರು.

ಇದಕ್ಕೆ ಉತ್ತರಿಸಿದ ಎಜಿ ಶಶಿಕಿರಣ್ ಶೆಟ್ಟಿ, ಸಿಎಟಿ ಆದೇಶದ ಕಾರಣ ಅಧಿಕಾರ ವಹಿಸಿಕೊಳ್ಳಲು ಅಧಿಕಾರಿ ಮುಂದಾಗಿದ್ದಾರೆ. ಹೀಗಾಗಿ ತುರ್ತು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು. ಕೊನೆಯದಾಗಿ, ಗುರುವಾರ ವಿಚಾರಣೆ ನಡೆಸಲಾಗುವುದು ಎಂದು ವಿಭಾಗೀಯ ಪೀಠ ತಿಳಿಸಿತು.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ್ದ ಕಾಲ್ತುಳಿತದ ನಂತರ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದ್ದ ಸರ್ಕಾರ, ಆಗಿನ ಪೊಲೀಸ್ ಆಯಕ್ತ ಬಿ ದಯಾನಂದ್, ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಸೇರಿದಂತೆ ಹಲವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿತ್ತು. ಇದರ ವಿರುದ್ಧ ವಿಕಾಸ್ ಕುಮಾರ್ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಮೊರೆ ಹೋಗಿದ್ದರು.

ವಿಕಾಸ್ ಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ, ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿ ವಿವರಣೆ ಕೋರಿತ್ತು. ನಂತರ, ನ್ಯಾಯಮೂರ್ತಿ ಬಿಕೆ ಶ್ರೀವಾತ್ಸವ ಮತ್ತು ಸಂತೋಷ್ ಮೆಹ್ರಾ ಅವರಿದ್ದ ಪೀಠ ಅರ್ಜಿಯ ವಿಚಾರಣೆ ನಡೆಸಿತ್ತು. ಮಂಗಳವಾರ ತೀರ್ಪು ಪ್ರಕಟಿಸಿ, ಕರ್ನಾಟಕ ಸರ್ಕಾರದ ನಿರ್ಧಾರವನ್ನು ರದ್ದುಪಡಿಸಿ ಆದೇಶ ನೀಡಿತ್ತು. ಇದರಿಂದಾಗಿ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿತ್ತು. ಹೀಗಾಗಿ ಇದೀಗ ಸಿಎಟಿ ಆದೇಶದ ವಿರುದ್ಧ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದೆ.

Tags:
error: Content is protected !!