ನವದೆಹಲಿ: ಲೋಕಸಭೆಯಲ್ಲಿ ಕಾಂಗ್ರೆಸ್‌ನ ಉಪನಾಯಕನಾಗಿ ಗೌರವ್ ಗೊಗೋಯ್ ನೇಮಕಗೊಂಡಿದ್ದಾರೆ.
ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕರಾಗಿದ್ದು, ಅಸ್ಸಾಂ ಮಾಜಿ ಮುಖ್ಯಮಂತ್ರಿ ಅರುಣ್ ಗೊಗೋಯ್ ಪುತ್ರ ಗೌರವ್ ಗೊಗೋಯ್ ಅವರನ್ನು ಉಪ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.
ಮುಂಬರುವ ಮುಂಗಾರು ಅಧಿವೇಶನದಲ್ಲಿ ಪಕ್ಷಕ್ಕೆ ಹೊಸ ಚೈತನ್ಯ ಮೂಡಿಸಲು ಈ ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. 2020ರಲ್ಲೂ ಕೂಡ ಗೌರವ್ ಗೊಗೋಯ್ ಅವರನ್ನು ಉಪನಾಯಕನನ್ನಾಗಿ ಆಯ್ಕೆ ಮಾಡಲಾಗಿತ್ತು.
ಗೌರವ್ ಗೊಗೋಯ್ ಅಸ್ಸಾಂನ ಜೋರ್ಹತ್ ಕ್ಷೇತ್ರದಿಂದ ಲೋಕಸಭಾ ಸಂಸದರಾಗಿದ್ದಾರೆ. ಚುನಾವಣೆಯಲ್ಲಿ 1,44,393 ಮತಗಳ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಗೌರವ್ ಗೊಗೋಯ್ ಅವರು ಸಾಮಾನ್ಯವಾಗಿ ಸಂಸತ್ತಿನಲ್ಲಿ ಕಾಂಗ್ರೆಸ್ ಪರವಾಗಿ ಪಕ್ಷದ ಚರ್ಚೆಗಳಲ್ಲಿ ಭಾಗವಹಿಸುತ್ತಾರೆ.
ಮುಖ್ಯ ಸಚೇತಕರಾಗಿ ಕೋಡಿಕುನ್ನಿಲ್ ಸುರೇಶ್ ಆಯ್ಕೆಯಾಗಿದ್ದಾರೆ. ಸಂಸದರಾದ ಮಾಣಿಕ್ಯಂ ಟ್ಯಾಗೋರ್ ಮತ್ತು ಎಂ.ಡಿ.ಜವೈದ್ ಅವರನ್ನು ಸಚೇತಕರನ್ನಾಗಿ ಮತ್ತು ಕೋಡಿಕುನ್ನಿಲ್ ಸುರೇಶ್ ಅವರನ್ನು ಮುಖ್ಯ ಸಚೇತಕರಾಗಿ ನೇಮಿಸಲಾಗಿದೆ.
ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…
ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…