pm narendra modi (1)
ಅಸ್ಸಾಂ: ದೇಶದ ಜನತೆಗೆ ನವರಾತ್ರಿ ಹಬ್ಬಕ್ಕೆ ಸಿಹಿ ಸುದ್ದಿ ನೀಡಲಾಗಿದೆ. ಜಿಎಸ್‌ಟಿ ಪ್ರಮಾಣದಲ್ಲಿ ಸಾಕಷ್ಟು ಕಡಿತ ಮಾಡಲಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ಅಸ್ಸಾಂನ ದರ್ಯಾಂಗ್‌ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಜಿಎಸ್‌ಟಿ ಕಡಿತದ ಸಿಹಿಸುದ್ದಿಯೊಂದಿಗೆ ಬಂದಿದ್ದೇನೆ. ನವರಾತ್ರಿ ಆರಂಭಕ್ಕೂ ಒಂದು ದಿನ ಮುನ್ನ ಜಿಎಸ್‌ಟಿ ಕಡಿತವಾಗಲಿದೆ. ಕಾರು, ಬೈಕ್, ಮಾತ್ರೆಗಳು ಹಾಗೂ ಅಗತ್ಯ ವಸ್ತುಗಳ ದರ ಕಡಿಮೆಯಾಗಲಿದೆ ಎಂದು ಹೇಳಿದರು.
ಇದನ್ನು ಓದಿ : ಮೈಸೂರು ದಸರಾದಲ್ಲಿ ಎಲ್ಲರೂ ಭಾಗವಹಿಸಿ: ಸಚಿವ ಎಚ್.ಸಿ.ಮಹದೇವಪ್ಪ
ಇದೇ ವೇಳೆ ಜನರು ಹೆಚ್ಚು ದೇಶಿ ನಿರ್ಮಿತ ವಸ್ತುಗಳನ್ನು ಖರೀದಿಸಬೇಕು. ಭಾರತದಲ್ಲಿ ತಯಾರಿಸಲ್ಟಟ್ಟ ವಸ್ತುಗಳನ್ನು ಖರೀದಿ ಮಾಡುವಂತೆ ಕರೆ ನೀಡಿದರು.
ದೇಶದ ಅಭಿವೃದ್ಧಿಯಲ್ಲಿ ಅಸ್ಸಾಂ ಪಾತ್ರ ಮಹತ್ವದ್ದಾಗಿದೆ. ಕಾಂಗ್ರೆಸ್ ಅಹಂಕಾರಿ ಪಕ್ಷವಾಗಿದ್ದು, ಕಾಂಗ್ರೆಸ್ ಆಡಳಿತದಲ್ಲಿ ಈಶಾನ್ಯ ರಾಜ್ಯಗಳನ್ನು ಕಡೆಗಣಿಸಿದೆ. ಕಾಂಗ್ರೆಸ್‌ನ 60 ವರ್ಷಗಳ ಆಡಳಿತದಲ್ಲಿ ಕೇವಲ 3 ಬ್ರಿಡ್ಜ್‌ಗಳನ್ನು ಮಾತ್ರ ನಿರ್ಮಿಸಲಾಗಿದೆ. ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ಕೇವಲ ಮೂರು ಸೇತುವೆಗಳನ್ನು ನಿರ್ಮಿಸಲಾಗಿದೆ. ಎನ್‌ಡಿಎ ಆಡಳಿತದ 10 ವರ್ಷಗಳ ಅವಧಿಯಲ್ಲಿ 6 ಸೇತುವೆಗಳನ್ನು ನಿರ್ಮಿಸಲಾಗಿದೆ. ಇದು ಡಬಲ್ ಇಂಜಿನ್ ಸರ್ಕಾರ. ದೇದ ಅಭಿವೃದ್ಧಿಗೆ ರಸ್ತೆ, ರೈಲು, ವಿಮಾನ ಸಂಪರ್ಕ ಪ್ರಮುಖವಾಗುತ್ತದೆ ಎಂದು ಹೇಳಿದರು.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…