ದೇಶ- ವಿದೇಶ

ಜಿಎಸ್‌ಟಿ ಪರಿಷ್ಕರಣೆ: ನಾಳೆಯಿಂದ ಬಹುತೇಕ ವಸ್ತುಗಳ ಬೆಲೆಯಲ್ಲಿ ಇಳಿಕೆ

ನವದೆಹಲಿ: ದೇಶದ ಜನತೆಗೆ ಬೆಲೆ ಏರಿಕೆಯ ಬಿಸಿ ಕಡಿಮೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸರಕು ಸೇವಾ ತೆರಿಗೆ ಪರಿಷ್ಕರಣೆ ಮಾಡಿದ ಹಿನ್ನಲೆಯಲ್ಲಿ ನಾಳೆಯಿಂದ ದೇಶದದ್ಯಾಂತ ದಿನನಿತ್ಯ ಬಳಸುವ ಹಾಲಿನಿಂದ ಹಿಡಿದು ಟೂತ್‌ಪೇಸ್ಟ್‌ವರೆಗೆ ಬಹುತೇಕ ಎಲ್ಲಾ ವಸ್ತುಗಳ ಬೆಲೆ ಗಣನೀಯವಾಗಿ ಇಳಿಕೆಯಾಗಲಿದೆ. ಇದು ಮಧ್ಯಮ ವರ್ಗದ ಜನರಿಗೆ ದೊಡ್ಡ ಮಟ್ಟದ ನೆರವು ನೀಡುವುದಂತೂ ಖಚಿತವಾಗಿದೆ.

ಹಾಲು, ತುಪ್ಪ, ಪನೀರ್‍ನಂತಹ ಡೈರಿ ಉತ್ಪನ್ನಗಳು ಇನ್ಮುಂದೆ ಅಗ್ಗವಾಗಲಿವೆ. ಈ ಮೊದಲು 1 ಲೀಟರ್ ಟೆಟ್ರಾ ಪ್ಯಾಕ್ ಹಾಲು 77 ರೂ. ಇತ್ತು. ಇನ್ನು ಮುಂದೆ ಇದು ಕೇವಲ 75 ರೂ ಗೆ ಸಿಗಲಿದೆ.

ಕೇವಲ ಆಹಾರ ಪದಾರ್ಥಗಳು ಮಾತ್ರವಲ್ಲ, ಮನೆಯಲ್ಲಿ ಪ್ರತಿದಿನ ಬಳಸುವ ಸೋಪು, ಡಿಟರ್ಜೆಂಟ್, ಟೂತ್‍ಪೇಸ್ಟ್, ಶಾಂಪೂ, ಹೇರ್ ಆಯಿಲ್‍ನಂತಹ ಶೇ.99ರಷ್ಟು ವಸ್ತುಗಳ ಮೇಲಿನ ಜಿಎಸ್‍ಟಿಯನ್ನು ಶೇ.12ರಿಂದ ನೇರವಾಗಿ ಶೇ.5ಕ್ಕೆ ಇಳಿಸಲಾಗಿದೆ.

ಸೋಪಿನಿಂದ ಕಾರಿನ ತನಕ, ಟ್ರ್ಯಾಕ್ಟರ್‌ನಿಂದ ಹವಾ ನಿಯಂತ್ರಕಗಳವರೆಗೆ ಒಟ್ಟು 400 ಉತ್ಪನ್ನಗಳ ಬೆಲೆ ಕಡಿತವಾಗಲಿದೆ. ನಿತ್ಯ ಬಳಸುವ ಆಹಾರ, ಗೃಹೋಪಯೋಗಿ ಉತ್ಪನ್ನಗಳು ಶೇ.5 ತೆರಿಗೆ ವ್ಯಾಪ್ತಿಗೆ ಬರುತ್ತವೆ. ಹಾಲು, ಬ್ರೆಡ್ ಮತ್ತು ಪನ್ನೀರ್‌ನಂತಹ ಉತ್ಪನ್ನಗಳಿಗೆ ಯಾವುದೇ ತೆರಿಗೆ ಇಲ್ಲ. ಪರಿಷ್ಕೃತ ದರಗಳು ನವರಾತ್ರಿಯ ಮೊದಲು ದಿನ ಅಂದರೆ ನಾಳೆಯಿಂದ ಜಾರಿಗೆ ಬರುತ್ತವೆ.

ಮಾರುಕಟ್ಟೆಯಲ್ಲಿ ಈಗಾಗಲೇ ಇರುವ ಔಷಧಗಳು ಹಾಗೂ ವೈದ್ಯಕೀಯ ಸಲಕರಣೆಗಳ ಬೆಲೆಗಳನ್ನು ಕಡಿಮೆ ಮಾಡಲು ಕೇಂದ್ರ ಸರಕಾರ ಕ್ರಮ ಕೈಗೊಂಡಿದೆ. ಈಗಾಗಲೇ ಮಾರುಕಟ್ಟೆಯಲ್ಲಿರುವ ಔಷಧಗಳನ್ನು ಹಿಂಪಡೆದು ಹೊಸ ಲೇಬಲ್‍ನೊಂದಿಗೆ ಮತ್ತೆ ಬಿಡುಗಡೆ ಮಾಡುವ ಅವಶ್ಯಕತೆ ಇಲ್ಲ. ಆದರೆ ಈ ಉತ್ಪನ್ನಗಳ ತಯಾರಕರು ಮತ್ತು ಮಾರ್ಕೆಟಿಂಗ್ ಕಂಪನಿಗಳು ಚಿಲ್ಲರೆ ಮಾರಾಟವು ಪರಿಷ್ಕೃತ ದರದಲ್ಲಿಮಾರಾಟವಾಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ರಾಷ್ಟ್ರೀಯ ಔಷಧ ಬೆಲೆ ಪ್ರಾಧಿಕಾರ (ಎನ್‍ಪಿಪಿಎ) ಆದೇಶಿಸಿದೆ.

ಆಂದೋಲನ ಡೆಸ್ಕ್

Recent Posts

ಮೋದಿ ಮುಂದೆ ಮೌನ ಮುರಿದ ಚಿರಾಗ್ ಚೀರಾಟ!

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಬಿಜೆಪಿಯವರನ್ನೂ ನಾಚಿಸುವಂತೆ ಕಟ್ಟಾ ಧಾರ್ಮಿಕ ಭಕ್ತನಂತೆ ಕಾಣುವ ವ್ಯಕ್ತಿತ್ವ ಪ್ರಧಾನಿ…

11 mins ago

ಎರಡು ಗಂಟೆ ಹೆಣ್ಣಾದಾಗಲೇ ಹೀಗೆ! ಪೂರ್ತಿ ಹೆಣ್ಣು ಜನ್ಮದ ಸಂಕಷ್ಟ ಹೇಗಿರಬಹುದು?

ಪಾತು ದೆಹಲಿ ನಗರ, ಹಗಲಿನ ಬೆಳಕು ನಿಧಾನಕ್ಕೆ ಕರಗಿ ಕತ್ತಲು ಇಷ್ಟಿಷ್ಟಾಗಿ ನಗರವನ್ನು ಆವರಿಸಿಕೊಳ್ಳುತ್ತಿತ್ತು, ರಸ್ತೆಗಳು ನಿರ್ಜನವಾಗುತ್ತಿದ್ದವು. ಇದೇ ಹೊತ್ತಲ್ಲಿ,…

3 hours ago

ಸೈಕಲ್ ನಂಜುಂಡಸ್ವಾಮಿಯ ಪಂಕ್ಚರ್ ಶಾಪ್ ಖಾಲಿ ಖಾಲಿ

ಅಜಯ್ ಕುಮಾರ್ ಎಂ.ಗುಂಬಳ್ಳಿ ಈಗ ಸೈಕಲ್‌ಗಳು ಅತಿವಿರಳ. ಊರಿನಲ್ಲಿ ನಾಲ್ಕೈದು ಮಂದಿ ಹಿರಿಯರು ಇನ್ನೂ ಗದ್ದೆಗೆ, ಕೆಲಸಕ್ಕೆ ಹೋಗಲು ಸೈಕಲ್…

4 hours ago

ಶಾಂತಿದೂತನ ನಾಡಿನಲ್ಲಿ ದ್ವೇಷದ ಕೆನ್ನಾಲಿಗೆ

ಫಾತಿಮಾ ರಲಿಯಾ ಕಳೆದ ಜುಲೈನಲ್ಲಿ ದಕ್ಷಿಣ ಆಫ್ರಿಕಾದ ಡರ್ಬನ್‌ನ ವಾರ್ವಿಕ್ ಸ್ಟ್ರೀಟ್ ಮಾರ್ಕೆಟ್‌ನಲ್ಲಿ ಕೆಲಸ ಮಾಡುತ್ತಿದ್ದ ಆರು ಮಂದಿ ಆಫ್ರಿಕನ್…

4 hours ago

ಇಂದು ಮೈಸೂರಿನಲ್ಲಿ ಜಾಗತಿಕ ಸೈಕಲ್ ಸವಾರಿ

ಸಿರಿ ಮೈಸೂರು ಹಿಂದೊಮ್ಮೆ ಕಾಲವೊಂದಿತ್ತು. ಆಗೆಲ್ಲಾ ರಸ್ತೆಯಲ್ಲಿ ಮೋಟಾರು ವಾಹನಗಳ ಸುಳಿವೇ ಇರುತ್ತಿರಲಿಲ್ಲ. ಬಹಳ ಶ್ರೀಮಂತರು ಮಾತ್ರ ಮೋಟಾರು ವಾಹನಗಳನ್ನು…

4 hours ago

ನಾಳೆ ಅರಮನೆಗೆ ಅಭಿಮನ್ಯು ಪ್ರವೇಶ

ಚಿರಂಜೀವಿ ಸಿ.ಹುಲ್ಲಹಳ್ಳಿ ಸತತ ಆರು ಬಾರಿ ಅಂಬಾರಿ ಹೊತ್ತಿದ್ದ ಆನೆ; ಈ ಬಾರಿ ನಿಶಾನೆ ಆನೆಯಾಗಿ ಭಾಗಿಯಾಗುವ ಸಾಧ್ಯತೆ ಮೈಸೂರು:…

4 hours ago