ದೇಶ- ವಿದೇಶ

ಜಿಎಸ್‌ಟಿ ಪರಿಷ್ಕರಣೆಯಿಂದ ದೇಶದ ಬೆಳವಣಿಗೆಗೆ ವೇಗ : ಪ್ರಧಾನಿ ಮೋದಿ

ಹೊಸದಿಲ್ಲಿ : ಜಿಎಸ್​ಟಿ ಪರಿಚ್ಕರಣೆಯಿಂದ ಹೊಸ ಇತಿಹಾಸ ಸೃಷ್ಟಿಯಾಗಿದೆ. ಮುಂದಿನ ಪೀಳಿಗೆಯ ಜಿಎಸ್‌ಟಿ ಸುಧಾರಣೆಗಳನ್ನು ನಾಳೆಯಿಂದ ಜಾರಿಗೆ ತರಲಾಗುವುದು. ಇದರಿಂದ ದೇಶದ ಬೆಳವಣಿಗೆಯು ವೇಗ ಪಡೆದುಕೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಸೆ.21 ರ ಸಂಜೆ 5 ಗಂಟೆಗೆ ರಾಷ್ಟವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ ಶುರು ಮಾಡಿದ ಮೊದಲಿಗೆ ದೇಶದ ಜನರಿಗೆ ದೇಶದ ಜನರಿಗೆ ನವರಾತ್ರಿ ಹಬ್ಬದ ಶುಭಾಶಯಗಳು ತಿಳಿಸಿದರು. ನಾಳೆ ನವರಾತ್ರಿ ಹಬ್ಬದ ಮೊದಲ ದಿನ ಆರಂಭವಾಗಲಿದ್ದು, ನವರಾತ್ರಿ ಮೊದಲ ದಿನದಿಂದ ಜಿಎಸ್​ಟಿ ಉತ್ಸವ ಆರಂಭವಾಗಲಿದೆ. ಜಿಎಸ್​ಟಿಯಿಂದ ನಿಮ್ಮೆಲ್ಲರ ಉಳಿತಾಯ ಶುರುವಾಗಲಿದೆ. ಎಲ್ಲ ವರ್ಗದ ಜನರಿಗೂ ಉಳಿತಾಯದ ಉತ್ಸವ ಪ್ರಾರಂಭವಾಗಲಿದೆ ಎಂದರು.

GST ಸುಧಾರಣೆಯಿಂದ ದೇಶದ ಅಭಿವೃದ್ಧಿಗೆ ಮತ್ತಷ್ಟು ಶಕ್ತಿ ತುಂಬಲಿದೆ. 2017ರಲ್ಲಿ ಭಾರತದಲ್ಲಿ ಜಿಎಸ್​ಟಿ ಸುಧಾರಣೆ ಆರಂಭಿಸಲಾಗಿತ್ತು. ದಶಕಗಳಿಂದ ಜನ ಬೇರೆ ಬೇರೆ ರೀತಿಯ ತೆರಿಗೆಯಿಂದ ಬಳಲುತ್ತಿದ್ದರು. ಪ್ರತಿಯೊಂದು ಜಾಗದಲ್ಲಿ ವಿವಿಧ ರೀತಿಯ ತೆರಿಗೆ ಜಾರಿಯಲ್ಲಿತ್ತು. ಇದರಿಂದ ಬೆಂಗಳೂರು-ಹೈದರಾಬಾದ್​ಗೆ ಉತ್ಪನ್ನ ಕಳಿಸಲು ಕಷ್ಟವಾಗುತಿತ್ತು. ತೆರಿಗೆ ಮತ್ತು ಟೋಲ್​ನಿಂದ ಜನರಿಗೆ ಬಹಳ ತೊಂದರೆ ಆಗಿತ್ತು. ದೇಶದ ಜನರು ವಿವಿಧ ರೀತಿಯ ತೆರಿಗೆ ಜಾಲದಲ್ಲಿ ಸಿಲುಕಿದ್ದರು. ನಾಳೆಯಿಂದ ಪ್ರತಿ ಮನೆಯಲ್ಲೂ ಖುಷಿ ಹೆಚ್ಚುತ್ತದೆ ಎಂದರು.

ಒನ್​ ನೇಷನ್, ಒನ್​ ಟ್ಯಾಕ್ಸ್​’ ಕನಸು ಈಡೇರಿದೆ. ಸಮಯ ಬದಲಾದಂತೆ ದೇಶದ ಅಗತ್ಯತೆ ಸಹ ಬದಲಾಗುತ್ತದೆ. ದೇಶದ ಭವಿಷ್ಯದ ದೃಷ್ಟಿಯಿಂದ ಜಿಎಸ್​ಟಿಯಲ್ಲಿ ಸುಧಾರಣೆ ಮಾಡಲಾಗಿದ್ದು, ಇದು ಹೊಸ ಪೀಳಿಗೆಗೆ ಸಹಕಾರಿಯಾಗಲಿದೆ. ಮಧ್ಯಮ ವರ್ಗದವರಿಗೆ ಸಹಕಾರ ಆಗಲಿದೆ. ರಾಜ್ಯದ ಅಭಿವೃದ್ಧಿಗೆ ಸಹಕಾರವಾಗಲಿದೆ. ಜಿಎಸ್‌ಟಿ ಸುಧಾರಣೆ ಬಡವರು, ಮಧ್ಯಮ ವರ್ಗ ಸೇರಿದಂತೆ ಎಲ್ಲಾ ಭಾರತೀಯರಿಗೆ ವ್ಯವಹಾರವನ್ನ ಸುಲಭಗೊಳಿಸುತ್ತದೆ. ಹೂಡಿಕೆಗಳನ್ನು ಆಕರ್ಷಕವಾಗಿಸಲಿದೆ. ಕಳೆದ 11 ವರ್ಷಗಳಲ್ಲಿ ತಮ್ಮ ಸರ್ಕಾರದ ಅಡಿಯಲ್ಲಿ ಸುಮಾರು 25 ಕೋಟಿ ಜನರನ್ನು ಬಡತನದಿಂದ ಹೊರತರಲಾಗಿದೆ ಎಂದರು.

ಆದಾಯ ತೆರಿಗೆಯನ್ನು ಕಡಿಮೆ ಮಾಡಲಾಗಿದೆ. ಜಿಎಸ್​ಟಿಯಿಂದ ಸಾಕಷ್ಟು ತೆರಿಗೆ ಕಡಿಮೆ ಆಗಿದೆ. ಇದರಿಂದ ಜನರಿಗೆ ಸಾಕಷ್ಟು ಹಣ ಉಳಿತಾಯವಾಗಲಿದೆ. ನಾಳೆಯಿಂದ (ಸೆ. 22) ದೇಶದ ಜನರಿಗೆ ಉಳಿತಾಯದ ಉತ್ಸವವಾಗಲಿದೆ. ದೇಶದ ಜನರಿಗೆ ಜಿಎಸ್​ಟಿ ಮತ್ತು ಆದಾಯ ತೆರಿಗೆ ಇಳಿಕೆಯಿಂದ ಒಂದು ವರ್ಷದಲ್ಲಿ 2.5 ಲಕ್ಷ ಕೋಟಿ ರೂ ಉಳಿತಾಯವಾಗಲಿದೆ ಎಂದು ಪ್ರಧಾನಿಗಳು ಅಭಿಪ್ರಾಯಪಟ್ಟರು.

ಆಂದೋಲನ ಡೆಸ್ಕ್

Recent Posts

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

33 mins ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

39 mins ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

43 mins ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

47 mins ago

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

12 hours ago